Ad Widget

ಪೆನ್ ಡ್ರೈವ್ ಪ್ರಕರಣ ನಡುವೆ ರಾಜ್ಯದಲ್ಲಿ 2ನೇ ಹಂತದ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯ

ಸಮಗ್ರ ನ್ಯೂಸ್: ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರ ಭಾನುವಾರ ಅಂತ್ಯಗೊಂಡಿದ್ದು, ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಭಾರಿ ಸದ್ದು ಮಾಡಿದ್ದು, ಮತದಾರನ ಮೇಲೆ ಸಣ್ಣ ಪ್ರಮಾಣದಲ್ಲಿ ಪ್ರಭಾವ ಬೀರುವ ಸಾಧ್ಯತೆ ಇದೆ.

Ad Widget . Ad Widget . Ad Widget . Ad Widget . Ad Widget . Ad Widget

ಕರ್ನಾಟಕ ಒಟ್ಟು 28 ಲೋಕಸಭಾ ಕ್ಷೇತ್ರಗಳನ್ನು ಹೊಂದಿದ್ದು, ಏಪ್ರಿಲ್ 26 ರಂದು 14 ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆ ನಡೆದಿತ್ತು.

Ad Widget . Ad Widget .

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಚುನಾವಣಾ ಪ್ರಚಾರ ಸಭೆಗಳಲ್ಲಿ ಪ್ರಜ್ವಲ್ ರೇವಣ್ಣ ಅವರು ನೂರಾರು ಮಹಿಳೆಯರ ಜೊತೆ ರಾಸಲೀಲೆ ನಡೆಸಿದ ವಿಡಿಯೋವನ್ನು ಪ್ರಸ್ತಾಪಿಸಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿರುವ ರಾಹುಲ್ ಗಾಂಧಿ, ‘ಮಾಸ್ ಅತ್ಯಾಚಾರಿ’ ಪರವಾಗಿ ಮತ ಕೇಳಿದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮಹಿಳೆಯರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದರು.

ಫೆಬ್ರವರಿಯಲ್ಲಿ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯ್ಕ್ ನಿಧನ ಹೊಂದಿದ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರಕ್ಕೂ ಮೇ 7 ರಂದು ಉಪಚುನಾವಣೆ ನಡೆಯುತ್ತಿದೆ.

ಚುನಾವಣಾ ಆಯೋಗದ ಪ್ರಕಾರ 227 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ತಲಾ 14 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಬಹುಜನ ಸಮಾಜ ಪಕ್ಷ 9 ಸ್ಥಾನಗಳಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದೆ. 117 ಮಂದಿ ಸ್ವತಂತ್ರ ಅಭ್ಯರ್ಥಿಗಳಿದ್ದಾರೆ. ಅಲ್ಲದೆ, ನೋಂದಾಯಿತ ಮಾನ್ಯತೆ ಪಡೆಯದ ಪಕ್ಷಗಳಿಂದ 73 ಮಂದಿ ಸ್ಪರ್ಧಿಸುತ್ತಿದ್ದಾರೆ. 14 ಕ್ಷೇತ್ರಗಳಲ್ಲಿ 2.59 ಕೋಟಿ ಮತದಾರರಿದ್ದು, ಒಟ್ಟು 28,257 ಮುಖ್ಯ ಮತಗಟ್ಟೆಗಳಿವೆ ಎಂದು ಚುನಾವಣ ಆಯೋಗ ತಿಳಿಸಿದೆ.

Leave a Comment

Your email address will not be published. Required fields are marked *