ರೇವಣ್ಣ ಬಂಧನ ಹಿನ್ನೆಲೆ ಮಗನು ಶರಣಾಗ್ತಾನೆ| ಸಿ.ಎಸ್ ಪುಟ್ಟರಾಜು ಹೇಳಿಕೆ

ಸಮಗ್ರ ನ್ಯೂಸ್: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್‌ ರೇವಣ್ಣ ಪೆನ್ ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಚಿವ, ಜೆಡಿಎಸ್‌ ನಾಯಕ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ‌, ಅಶ್ಲೀಲ ವಿಡಿಯೊಗಳು ವೈರಲ್‌ ಆಗುತ್ತಿದ್ದಂತೆ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್‌ ರೇವಣ್ಣ ಕೂಡ ಭಾರತಕ್ಕೆ ಬಂದು ಪೊಲೀಸರಿಗೆ ಶರಣಾಗಲಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ.

. Ad Widget . Ad Widget . Ad Widget

ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಕಾನೂನು ಪ್ರಕಾರ ಯಾವ ಪ್ರಕ್ರಿಯೆ ಅನುಸರಿಸಬೇಕೋ, ಅದೆಲ್ಲವನ್ನೂ ಅನುಸರಿಸಲಾಗುತ್ತದೆ. ಕಾನೂನು ಪ್ರಕಾರ ಅವರು ನಡೆದುಕೊಳ್ಳುತ್ತಾರೆ. ಇನ್ನು, ಪ್ರಜ್ವಲ್‌ ರೇವಣ್ಣ ಕೂಡ ಆಗಮಿಸಲಿದ್ದಾರೆ. ಅವರು ಪೊಲೀಸರಿಗೆ ಶರಣಾಗಲಿದ್ದಾರೆ” ಎಂಬುದಾಗಿ ಜೆಡಿಎಸ್‌ ನಾಯಕ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಮಾಹಿತಿ ನೀಡಿದ್ದಾರೆ. ಆದರೆ, ಪ್ರಜ್ವಲ್‌ ರೇವಣ್ಣ ಯಾವಾಗ ಭಾರತಕ್ಕೆ ವಾಪಸಾಗಲಿದ್ದಾರೆ ಎಂದು ಹೇಳಲಿಲ್ಲ.

. Ad Widget .

ಇನ್ನೂ ಎಚ್.ಡಿ ರೇವಣ್ಣ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ವೈದ್ಯಕೀಯ ಪರೀಕ್ಷೆ ಈಗ ಮುಗಿದಿದ್ದು ಎಸ್ಐಟಿ ವಶದಲ್ಲಿ ರೇವಣ್ಣ ಇದ್ದಾರೆ. ದಾರಿತಪ್ಪಿದ ಮಗನಿಂದ ಅಪ್ಪನ ಪರಿಸ್ಥಿತಿಯು ಇದೆ ರೀತಿಯಾಗಿದೆ. ಅಪ್ಪನನ್ನು ವಶಪಡಿಸಿಕೊಂಡಿರುವ ಕಾರಣ ಪ್ರಜ್ವಲ್ ವಾಪಸ್ ಬರುತ್ತಾರಾ ಎಂದು ಕಾದುನೋಡಬೇಕಿದೆ.

Leave a Comment

Your email address will not be published. Required fields are marked *