ಸಮಗ್ರ ನ್ಯೂಸ್: ಇಂದು ಹವಾಮಾನ ಇಲಾಖೆ ಮುನ್ಸೂಚನೆಯಂತೆ ಬೆಂಗಳೂರಿಗೆ ವರುಣ ತಂಪೆರೆದಿದ್ದಾನೆ. ಬೆಂಗಳೂರು ನಗರದೆಲ್ಲೆಡೆ ಆಲಿಕಲ್ಲು ಜೊತೆಗೆ ಮಳೆರಾಯ ಆರ್ಭಟಿಸಿದ್ದಾನೆ. ಮಳೆ ಜೊತೆಗೆ ಗಡುಗು, ಗಾಳಿಯ ಪ್ರಮಾಣ ಕೂಡ ಜಾಸ್ತಿ ಇತ್ತು. ಬಿಸಿಲಿನಿಂದ ಬೇಸತ್ತಿದ್ದ ರಾಜಧಾನಿ ಜನರಿಗೆ ವರುಣ ಮತ್ತೆ ಎಂಟ್ರಿ ನೀಡಿದ್ದು ಸಂತಸ ತಂದಿದೆ.
ಬೆಂಗಳೂರಿನ ಚಾಲುಕ್ಯ ಸರ್ಕಲ್, ಪ್ಯಾಲೇಸ್ ರಸ್ತೆ ಸುತ್ತಮುತ್ತ, ಶಾಂತಿನಗರ, ರಿಚ್ಮಂಡ್ ಸರ್ಕಲ್, ಕೆಆರ್ ಮಾರ್ಕೆಟ್, ಕಾರ್ಪೊರೇಷನ್, ರಾಜಾಜಿನಗರ, ಮೆಜೆಸ್ಟಿಕ್, ರೇಸ್ ಕೋರ್ಸ್, ಕಾರ್ಪೋರೇಷನ್, ಮಹಾಲಕ್ಷ್ಮಿಲೇಔಟ್, ಬಸವೇಶ್ವರನಗರ, ಸದಾಶಿವನಗರ, ಬ್ಯಾಟರಾಯನಪುರ ಮತ್ತು ಮತ್ತಿಕೆರೆ, ಪದ್ಮನಾಭನಗರ, ಬನಶಂಕರಿ, ಕಾಮಾಕ್ಯ, ಕತ್ರಿಗುಪ್ಪೆ, ಕದರೇನ ಹಳ್ಳಿ, ಚಿಕ್ಕಲು ಸಂದ್ರ, ಶಿವಾಜಿನಗರ ಭಾಗದಲ್ಲಿ ಮಳೆ ಅಬ್ಬರ ಜೋರಾಗಿತ್ತು. ಇನ್ನೂ ಮಂತ್ರಿಮಾಲ್ ಸಮೀಪ ನೀರು ಆವರಿಸಿ ಟ್ರಾಫಿಕ್ ಜಾಮ್ ಉಂಟಾಯಿತು.
ಅಷ್ಟೇ ಅಲ್ಲದೆ ಬೆಂಗಳೂರಿನ ವಿವಿಧೆಡೆ ಮರಗಳು ಧರೆಗುರುಳಿ ವಾಹನ ಸವಾರರು ಪರದಾಡುವಂತಾಗಿದೆ