ಸಮಗ್ರ ಉದ್ಯೋಗ: ರಾಷ್ಟ್ರೀಯ ತನಿಖಾ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ಇನ್ವೆಸ್ಟಿಗೇಶನ್ ಎಕ್ಸ್ಪರ್ಟ್ (ಕನ್ಸಲ್ಟೆಂಟ್) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 17, 2024 ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ವಿದ್ಯಾರ್ಹತೆ:
ರಾಷ್ಟ್ರೀಯ ತನಿಖಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ರಾಷ್ಟ್ರೀಯ ತನಿಖಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 65 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ರಾಷ್ಟ್ರೀಯ ತನಿಖಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಸಂದರ್ಶನ ನಡೆಯುವ ಸ್ಥಳ:
NIA ಹೆಡ್ ಕ್ವಾಟ್ರಸ್
CGO ಕಾಂಪ್ಲೆಕ್ಸ್
ಲೋಧಿ ರಸ್ತೆ
ನವದೆಹಲಿ-110003