Ad Widget

ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಉದ್ಯೋಗವಕಾಶ, ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ರಾಷ್ಟ್ರೀಯ ತನಿಖಾ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ಇನ್ವೆಸ್ಟಿಗೇಶನ್ ಎಕ್ಸ್​​ಪರ್ಟ್​​ (ಕನ್ಸಲ್ಟೆಂಟ್​) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 17, 2024 ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Ad Widget . Ad Widget . Ad Widget . Ad Widget . Ad Widget . Ad Widget

ವಿದ್ಯಾರ್ಹತೆ:
ರಾಷ್ಟ್ರೀಯ ತನಿಖಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

Ad Widget . Ad Widget .

ವಯೋಮಿತಿ:
ರಾಷ್ಟ್ರೀಯ ತನಿಖಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 65 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:
ರಾಷ್ಟ್ರೀಯ ತನಿಖಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಸಂದರ್ಶನ ನಡೆಯುವ ಸ್ಥಳ:
NIA ಹೆಡ್ ಕ್ವಾಟ್ರಸ್
CGO ಕಾಂಪ್ಲೆಕ್ಸ್
ಲೋಧಿ ರಸ್ತೆ
ನವದೆಹಲಿ-110003

Leave a Comment

Your email address will not be published. Required fields are marked *