ಸಮಗ್ರ ನ್ಯೂಸ್ : ಚಾಲಕನ ನಿಯಂತ್ರಣ ತಪ್ಪಿ ಇಂಡಿಕಾ ಕಾರು ಚರಂಡಿಗೆ ಪಲ್ಟಿಯಾಗಿ, ಡಿಕ್ಕಿ ರಭಸಕ್ಕೆ ಕಾರು ಛಿದ್ರವಾಗಿದ್ದು, ಕಾರಿನಲ್ಲಿದ್ದ ಇಬ್ಬರು ವೃದ್ಧರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ತಾಲೂಕಿನ ಹುಣಸೇಕಟ್ಟೆ ಗ್ರಾಮದ ಪಕ್ಕದಲ್ಲಿರುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಹರಿಹರದ ಸಾರಥಿ ಗ್ರಾಮದ ಕೊಟ್ರೇಶಪ್ಪ (65), ಹುಬ್ಬಳ್ಳಿಯ ಪುಷ್ಟ (55) ಮೃತ ದುರ್ದೈವಿಗಳು. ಘಟನೆಯಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಚಿತ್ರದುರ್ಗದಲ್ಲಿ ಮದುವೆ ಮುಗಿಸಿಕೊಂಡು ವಾಪಸ್ ಬರುವಾಗ ಈ ದುರ್ಘಟನೆ ನಡೆದಿದೆ.
ಅತಿ ವೇಗದ ಚಾಲನೆಯಿಂದಲೇ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ಗಾಯಗೊಂಡವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ ಎಂಬ ಮಾಹಿತಿ ತಿಳಿದು ಬಂದಿದೆ.