ಸಮಗ್ರ ನ್ಯೂಸ್: ಕಳೆದ ಮೂರು ತಿಂಗಳಿನಿಂದ ವೇತನ ನೀಡದ ಕಾರಣ ಆರೋಗ್ಯ ಕವಚ 108 ಆಂಬುಲೆನ್ಸ್ ಸಿಬ್ಬಂದಿ ಮುಷ್ಕರಕ್ಕೆ ಸಜ್ಜಾಗಿದ್ದಾರೆ.
ಮೇ 6ರ ರಾತ್ರಿ 8 ಗಂಟೆಯಿಂದ ರಾಜ್ಯವ್ಯಾಪಿ ಆಂಬುಲೆನ್ಸ್ ಸೇವೆಗಳನ್ನು ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕಳೆದ ಫೆಬ್ರವರಿ, ಮಾರ್ಚ್, ಏಪ್ರಿಲ್ ತಿಂಗಳ ವೇತನ ನೀಡದೆ ಬಾಕಿ ಉಳಿಸಿಕೊಳ್ಳಲಾಗಿದೆ.
ಜಿವಿಕೆ ಸಂಸ್ಥೆ ಈಗಾಗಲೇ ಡಿಸೆಂಬರ್, ಜನವರಿ ತಿಂಗಳ ವೇತನವನ್ನು 30 ಸಾವಿರ ರೂ. ಕಡಿತ ಮಾಡಿ ಕೇವಲ 13,000 ರೂ. ನೀಡಿದೆ.
ಹೀಗಾಗಿ ಸೋಮವಾರ ಸಂಜೆಯೊಳಗೆ ವೇತನ ಪಾವತಿಸುವಂತೆ ಆರೋಗ್ಯ ಇಲಾಖೆಗೆ ಮನವಿ ಮಾಡಲಾಗಿದ್ದು, ಕಡಿತಗೊಳಿಸಿದ ವೇತನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಲಾಗಿದೆ. ವೇತನ ಪಾವತಿಸದಿದ್ದರೆ ಮೇ 6 ರ ರಾತ್ರಿಯಿಂದ ರಾಜ್ಯವ್ಯಾಪಿ ಮುಷ್ಕರ ಕೈಗೊಳ್ಳುವುದಾಗಿ ಕರ್ನಾಟಕ ರಾಜ್ಯ ಆರೋಗ್ಯ ಕವಚ 108 ನೌಕರರ ಸಂಘದಿಂದ ಎಚ್ಚರಿಕೆ ನೀಡಲಾಗಿದೆ.