ಮೈಸೂರು : ಸ್ಟೇರಿಂಗ್‌ ಕಟ್ ಆಗಿ ಗದ್ದೆಗೆ ನುಗ್ಗಿದ ಬಸ್‌ – 30 ಪ್ರಯಾಣಿಕರಿಗೆ ಗಾಯ

ಸಮಗ್ರ ನ್ಯೂಸ್‌ : ಕೆಎಸ್‌ಆರ್‌ಟಿಸಿ ಬಸ್‌ವೊಂದರ ಸ್ಟೇರಿಂಗ್‌ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಕೆಸ್ತೂರು ಗೇಟ್ ಬಳಿ ನಡೆದಿದೆ.

Ad Widget ... ..

ಘಟನೆಯಲ್ಲಿ 30 ಪ್ರಯಾಣಿಕರು ಗಾಯಗೊಂಡಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕೆ.ಆರ್.ನಗರ ಮತ್ತು ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಕೆಆರ್‌ನಗರ ಡಿಪೋಗೆ ಸೇರಿದ ಬಸ್ ಕೇರಳಾಪುರದಿಂದ ಸಾಲಿಗ್ರಾಮ, ಚುಂಚನಕಟ್ಟೆ ಮಾರ್ಗವಾಗಿ ಮೈಸೂರಿಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಪ್ರಕರಣ ಕೆಆರ್‌ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Ad Widget

Leave a Comment

Your email address will not be published. Required fields are marked *