ಚಿಕ್ಕಮಗಳೂರು: ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್‌ : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನ ಎನ್‌ಆರ್ ಪುರ ತಾಲೂಕಿನ ಕರಗುಂದ ಗ್ರಾಮದ ಬಳಿ ನಡೆದಿದೆ.

Ad Widget ... ..

ಬೈಕ್‌ ಸವಾರರು ವೇಗವಾಗಿ ಬಂದು ವಿದ್ಯುತ್ ಕಂಬಕ್ಕೆ ಗುದ್ದಿದ್ದಾರೆ. ಪರಿಣಾಮ ಬೈಕ್‌ನಿಂದ ಹಾರಿ ಕೆಳಗೆ ಬಿದ್ದಿದ್ದು, ತಲೆಗೆ ಗಂಭೀರ ಪೆಟ್ಟಾಗಿದೆ.ಇದರಿಂದಾಗಿ ಹೊರನಾಡು ಗ್ರಾಮದ ಉಮೇಶ್, ಮುಂಡಗದ ಮನೆ ಗ್ರಾಮದ ಸುನಿಲ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Ad Widget

ಮೂಡಿಗೆರೆ ತಾಲೂಕಿನ ಮುಂಡಗದ ಮನೆ ಗ್ರಾಮದ ಉಮೇಶ್, ಸುನೀಲನನ್ನು ಶಿವಮೊಗ್ಗಕ್ಕೆ ಬಿಡಲು ಹೋಗುತ್ತಿದ್ದರು. ತಿರುವಿನಲ್ಲಿ ನಿಯಂತ್ರಣಕ್ಕೆ ಬೈಕ್ ನೇರ ವಿದ್ಯುತ್‌ ಕಂಬಕ್ಕೆ ಗುದ್ದಿದೆ. ಸ್ಥಳಕ್ಕೆ ಎನ್‌.ಆರ್ ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Leave a Comment

Your email address will not be published. Required fields are marked *