Ad Widget .

ಬೀದರ್: ಅಕ್ರಮವಾಗಿ ಸಾರಾಯಿ ಸಾಗಾಟ- 4.40 ಲಕ್ಷ ರೂಪಾಯಿ ಮೌಲ್ಯದ ಮದ್ಯ ವಶಕ್ಕೆ

ಸಮಗ್ರ ನ್ಯೂಸ್‌ : ಅಕ್ರಮವಾಗಿ ಸಾರಾಯಿ ಸಾಗಿಸುತ್ತಿದ್ದ ವೇಳೆ ಅಬಕಾರಿ ಇಲಾಖೆಯಿಂದ ಭರ್ಜರಿ ಕಾರ್ಯಚರಣೆ ನಡೆಸಿದ್ದು, ಮತದಾರರಿಗೆ ಹಂಚಲು ತಂದಿದ್ದ 4.40 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಮದ್ಯವನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

Ad Widget . Ad Widget .

ಬೀದರ್ ಲೋಕಸಭೆ ಕ್ಷೇತ್ರದಲ್ಲಿ ಮತದಾರರಿಗೆ ಹಂಚಲು ತಂದಿದ್ದರು ಅಕ್ರಮ ಮದ್ಯ ವಶಕ್ಕೆ ಪಡೆಯಲಾಗಿದೆ. ಹೂಲಸೂರಿನಿಂದ ಬಸವಕಲ್ಯಾಣಕ್ಕೆ ಹುಂಡೈ ಕಾರ್ನಲ್ಲಿ ಮದ್ಯ ಸಾಗಿಸಲಾಗುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೋಲಿಸರು ಕಾರ್ ತಡೆದು ಪರಿಶೀಲನೆ ನಡೆಸಿದಾಗ ಮದ್ಯ ಪತ್ತೆಯಾಗಿದೆ.

Ad Widget . Ad Widget .

ಕಾರ್ನಲ್ಲಿ ಎರಡು‌ ಲಕ್ಷ ಲೀಟರ್ ಅಕ್ರಮ ಮದ್ಯವನ್ನು 36 ಬಾಕ್ಸ್ನಲ್ಲಿ ಸಾಗಿಸಲಾಗುತ್ತಿತ್ತು. ಕಾರ್ ಚಾಲಕ ಮಲ್ಲಿಕಾರ್ಜುನ ಕಂಟೆಪ್ಪಾನನ್ನು ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ ಜಿಲ್ಲಾ ಅಬಕಾರಿ ಡಿ.ಸಿ ಡಾ.ಸಂಗನಗೌಡ ಪಿ ಹೊಸಳ್ಳಿ, ಅಬಕಾರಿ ಉಪ ಅಧಿಕ್ಷಕರಾದ ರವಿ ಮರಗೋಡ್, ಹನುಮಂತ ಗುತ್ತೆದಾರ, ರಮೇಶ್ ಬಿರಾದಾರ, ಶರಣಮ್ಮಾ ಬಜಂತ್ರಿ ಸೇರಿ ಹಲವರು ಉಪಸ್ಥಿತರಿದ್ದರು

Leave a Comment

Your email address will not be published. Required fields are marked *