Ad Widget .

ಪಶ್ಚಿಮ ಬಂಗಾಳ – ಬಾಂಬ್‌ ಸ್ಫೋಟ : ಮಗು ಮೃತ್ಯು, ಇಬ್ಬರು ಗಂಭೀರ

ಸಮಗ್ರ ನ್ಯೂಸ್‌ : ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಮಕ್ಕಳು ಆಕಸ್ಮಿಕವಾಗಿ ಕಚ್ಚಾ ಬಾಂಬ್‌ ಅನ್ನು ಚೆಂಡು ಎಂದು ಭಾವಿಸಿ ಎತ್ತಿಕೊಂಡಿದ್ದಾರೆ. ಆಗ ಅದು ಸ್ಫೋಟಗೊಂಡ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಪಾಂಡುವಾ ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಮಗುವೊಂದು ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಘಟನೆಯಲ್ಲಿ ಪುಟ್ಟ ಕಂದಮ್ಮ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಗಾಯಗೊಂಡ ಇಬ್ಬರಲ್ಲಿ ಒಬ್ಬ ತನ್ನ ಬಲಗೈಯನ್ನೇ ಕಳೆದುಕೊಂಡಿದ್ದಾನೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.

Ad Widget . Ad Widget . Ad Widget .

ಇನ್ನು ಲೋಕಸಭಾ ಚುನಾವಣೆ ಹಿನ್ನೆಲೆ ಟಿಎಂಸಿ ಸಂಸದ ಅಭಿಷೇಕ್‌ ಬ್ಯಾನರ್ಜಿ ಇಂದು ಇದೇ ಪ್ರದೇಶದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ಕೈಗೊಳ್ಳಬೇಕಿತ್ತು. ಬೃಹತ್‌ ಸಾರ್ವಜನಿಕ ಸಭೆಯನ್ನೂ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಅದಕ್ಕೂ ಮುನ್ನ ಈ ಘಟನೆ ನಡೆದಿರುವುದು ಎಲ್ಲರಲ್ಲೂ ಆತಂಕ ಮೂಡಿಸಿದೆ. ಇನ್ನು ನಾಳೆ ನಡೆಯಲಿರುವ ಮೂರನೇ ಹಂತ ಚುನಾವಣೆಯಲ್ಲಿ ರಾಜ್ಯ ನಾಲ್ಕು ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಕಳೆದ ವಾರ ಪಶ್ಚಿಮ ಬಂಗಾಳದ ರಾಜ್ಯ ರಾಜಧಾನಿ ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್‌ನ ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟು, ಟಿಎಂಸಿಯ ಕಾರ್ಯಕರ್ತನನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಅರ್ಜುನ್‌ಪುರದ ಪಶ್ಚಿಮ್‌ಪುರ ಪ್ರದೇಶದಲ್ಲಿ ಟಿಎಂಸಿಯ ಒಂದು ಬಣ ಕರೆಂಟ್‌ ಕಟ್‌ ಮಾಡಿದ ವಿಚಾರಕ್ಕೆ ಜಗಳ ಶುರುವಾಗಿತ್ತು. ಎರಡೂ ತಂಡಗಳ ಜಗಳ ತಾರಕಕ್ಕೇರಿ ಮಾರಾಮಾರಿ ನಡೆದಿದೆ. ಪರಸ್ಪರ ದೊಣ್ಣೆ, ಕಲ್ಲಿನಿಂದ ಬಡಿದಾಟ ನಡೆದಿತ್ತು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಸಂಜೀವ್‌ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ದಾಖಲಾಗುವ ಮೊದಲೇ ಆತ ಕೊನೆಯುಸಿರೆಳೆದಿದ್ದ.

ಕಲ್ಲೇಟು ಬಿದ್ದು ಕೆಳಗೆ ಬಿದ್ದಿದ್ದ ಸಂಜೀವ್‌ ಮೇಲೆ ದುಷ್ಕರ್ಮಿಗಳು ರಾಡ್‌ನಿಂದ ದಾಳಿ ನಡೆಸಿದ್ದರು ಎನ್ನಲಾಗಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 13 ಜನರ ವಿರುದ್ಧ ಕೇಸ್‌ ದಾಖಲಾಗಿದ್ದು, ಅವರನ್ನು ಅರೆಸ್ಟ್‌ ಮಾಡಲಾಗಿದೆ. ಘಟನೆ ಸಂಬಂಧ ತನಿಖೆ ಮುಂದುವರೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಇನ್ನು ಸಂಜೀವ್‌ ದಾಸ್‌ ಹತ್ಯೆಗೆ ಖಂಡನೆ ವ್ಯಕ್ತಪಡಿಸಿರುವ ಅವರ ಕುಟುಂಬಸ್ಥರು ದುರ್ಘಟನೆಗೆ ಟಿಎಂಸಿಯನ್ನೇ ಹೊಣೆಯನ್ನಾಗಿದೆ.

ಮತ್ತೊಂದೆಡೆ ಅದೇ ದಿನ ದಕ್ಷಿಣ ಕೋಲ್ಕತಾದ ಆನಂದಪುರದಲ್ಲಿ ಬಿಜೆಪಿ ನಾಯಕಿ ಸರಸ್ವತಿ ಸರ್ಕಾರ್‌ ಮೇಲೆಯೂ ಮಾರಣಾಂತಿಕ ಹಲ್ಲೆ ನಡೆದಿದೆ. ಟಿಎಂಸಿ ಕಾರ್ಯಕರ್ತರು ಸರಸ್ವತಿ ಮೇಲೆ ಹರಿತವಾದ ಆಯುಧದಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಚುನಾವಣಾ ಬ್ಯಾನರ್‌ ಕಟ್ಟುವ ವಿಚಾರಕ್ಕೆ ಬಿಜೆಪಿ ಮತ್ತು ಟಿಎಂಸಿ ನಾಯಕರ ನಡುವೆ ಮಾರಾಮಾರಿ ನಡೆದಿದ್ದು, ಈ ವೇಳೆ ಆಕೆಯ ತಲೆಗೆ ಗಂಭೀರ ಗಾಯಗಳಾಗಿವೆ.

Leave a Comment

Your email address will not be published. Required fields are marked *