Ad Widget

ರೇವಣ್ಣರನ್ನ ಎಸ್ಐಟಿ ಕಸ್ಟಡಿಗೆ ನೀಡಿದ ಜಡ್ಜ್| 3 ದಿನ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶ

ಸಮಗ್ರ ನ್ಯೂಸ್: ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನವಾಗಿರುವ ಮಾಜಿ ಸಚಿವ ಎಚ್.‌ಡಿ. ರೇವಣ್ಣ ಅವರನ್ನು 3 ದಿನಗಳವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget

ಇಂದು ಕೋರ್ಟ್‌ ರಜೆ ಇರುವ ಹಿನ್ನೆಲೆ ಈ ಪ್ರಕರಣದ ಪ್ರಮುಖ ಆರೋಪಿ ಎಚ್.ಡಿ. ರೇವಣ್ಣ ಅವರನ್ನು ಕೋರಮಂಗಲದಲ್ಲಿರುವ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ನಿವಾಸಕ್ಕೆ ಕರೆತರಲಾಗಿತ್ತು. ಜಡ್ಜ್‌ ಮುಂದೆ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದರು. ಈ ವೇಳೆ ಎಸ್‌ಐಟಿ ಪರ ವಕೀಲರು, ಪ್ರಕರಣದ ತೀವ್ರತೆಯನ್ನು ವಿವರಿಸಿ ರೇವಣ್ಣ ಅವರನ್ನು ಕಸ್ಟಡಿಗೆ ಕೊಡುವಂತೆ ಮನವಿ ಮಾಡಿದರು. ಆದರೆ, ಇದಕ್ಕೆ ರೇವಣ್ಣ ಪರ ವಕೀಲರಾದ ಮೂರ್ತಿ ಡಿ. ನಾಯಕ್‌ ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ, ಎಸ್‌ಐಟಿಯವರು ತಮ್ಮ ಕಕ್ಷಿದಾರರಿಗೆ ಕಿರುಕುಳವನ್ನು ನೀಡುತ್ತಿದ್ದಾರೆ. ಅವರಿಗೆ ಆರೋಗ್ಯ ಸಮಸ್ಯೆ ಇದೆ ಎಂದು ವಾದವನ್ನು ಮಂಡಿಸಿದರು.

Ad Widget . Ad Widget .

ಇಂದು ರಿಮೈಂಡ್‌ ಕಾಪಿ‌ಯನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರಿಗೆ ಸಲ್ಲಿಕೆ ಮಾಡಿದ್ದಾರೆ. ಸುಮಾರು 15 ಅಂಶಗಳನ್ನು ಉಲ್ಲೇಖ ಮಾಡಿ 5 ದಿನಗಳ ಕಾಲ ಕಸ್ಟಡಿಗೆ ವಹಿಸುವಂತೆ ಕೋರಿದ್ದಾರೆ. ವಾದ – ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರಾದ ರವೀಂದ್ರ ಕುಮಾರ್ ಬಿ. ಕಟ್ಟಿಮನಿ ಅವರು, ಎಚ್‌.ಡಿ. ರೇವಣ್ಣ ಅವರನ್ನು 3 ದಿನಗಳ ವರೆಗೆ ಅಂದರೆ ಮೇ 8ರವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

Leave a Comment

Your email address will not be published. Required fields are marked *