Ad Widget .

ಬಂಟವಾಳದ ಪ್ರತಿಷ್ಠಿತ ಮದುವೆ ಸಭಾಂಗಣದ ಅವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಸಮಗ್ರ ನ್ಯೂಸ್‌ : ಬಂಟವಾಳದ ಪ್ರತಿಷ್ಠಿತ ಮದುವೆ ಸಭಾಂಗಣದ ಅವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ.

Ad Widget . Ad Widget .

ತಲಪಾಡಿಯಲ್ಲಿರುವ ಬಂಟವಾಳದ ಬಂಟರ ಭವನದ ಕಂಪೌಂಡ್ ನ ಒಳಗಡೆಯಲ್ಲಿ ರಕ್ತಸಿಕ್ತವಾಗಿ ಬಿದ್ದುಕೊಂಡಿರುವ ವ್ಯಕ್ತಿಯ ಶವ ಪತ್ತೆಯಾಗಿದೆ.

Ad Widget . Ad Widget .

ಉಪ್ಪಿನಂಗಡಿ ವಳಾಲು ಮೂಲದ ನಿವಾಸಿ ಸಂತೋಷ್ ಎಂಬಾತನ ಶವ ಇದಾಗಿದೆ ಎಂದು ಪೋಲೀಸ್ ಮೂಲಗಳು ತಿಳಿಸಿವೆ. ಬಂಟರ ಭವನದ ಹೊರಗಡೆಯಲ್ಲಿ ಈತನ ಸೇರಿದ ಬೈಕ್ ನಿಲ್ಲಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸಾವಿಗೆ ಸ್ಪಷ್ಟವಾದ ಕಾರಣ ಗೊತ್ತಾಗಿಲ್ಲವಾದರೂ ಪೊಲೀಸ್ ಮೂಲಗಳ ಪ್ರಕಾರ ಈತ ಬೈಕ್ ನಿಲ್ಲಿಸಿ ಕಂಪೌಂಡ್ ಮೇಲೆ ಕುಳಿತು ಕೊಂಡಿರಬೇಕು.ಅ ಸಂದರ್ಭದಲ್ಲಿ ನಿಯಂತ್ರಣ ಕಳೆದು ಕೆಳಗೆ ಬಿದ್ದಿರಬೇಕು ಎಂದ ಶಂಕಿಸಲಾಗಿದೆ.

ಹೆಚ್ಚಿನ ವಿವರ ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ತಿಳಿಯಬೇಕಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *