ಸುಳ್ಯ: ಮೊಬೈಲ್ ರಿಚಾರ್ಜ್ ಗೆ ಬಂದಿದ್ದ ಯುವತಿಯ ಫೋಟೋ ಕ್ಲಿಕ್ಕಿಸಿದ ಅನ್ಯಕೋಮಿನ ಯುವಕ| ದೂರು ದಾಖಲು

ಸಮಗ್ರ ನ್ಯೂಸ್: ಕರೆನ್ಸಿ ರಿಚಾರ್ಚ್‌ಗೆಂದು ಏರ್ ಟೆಲ್ ಮಳಿಗೆಗೆ ಬಂದ ಯುವತಿಯೊಬ್ಬಳ ಫೋಟೋ ಕ್ಲಿಕ್ಕಿಸಿದ ಅನ್ಯಕೋಮಿನ ಯುವಕನ ಮೇಲೆ ಯುವತಿಯ ಮನೆಯವರು ಪೊಲೀಸ್‌ಗೆ ದೂರು ನೀಡಿದ ಘಟನೆ ಸೋಮವಾರ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ.

Ad Widget ... ..

ಗಾಂಧಿನಗರದಲ್ಲಿರುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಹಿಂದೂ ಯುವತಿ ಮೊಬೈಲ್‌ ರಿಚಾರ್ಜ್‌ಗೆ ಬಂದ ಸಂದರ್ಭ ಕುಳಿತುಕೊಳ್ಳುವಂತೆ ಹೇಳಿದ ಯುವಕ ಆಕೆಯ ಅರಿವಿಗೆ ಬಾರದಂತೆ ಫೋಟೋ ಕ್ಲಿಕ್ಕಿಸಿದ್ದನು.

Ad Widget

ಇದನ್ನು ಗಮನಿಸಿದ ಯುವತಿ ಆಕ್ಷೇಪಿಸಿರುವುದಲ್ಲದೆ ಆತನ ಮೊಬೈಲನ್ನು ಕಸಿದು ನೋಡಿದಾಗ ತನ್ನ ಫೋಟೋ ಇರುವುದನ್ನು ನೋಡಿ ಗಾಬರಿಯಿಂದ ಅದನ್ನು ಡಿಲೀಟ್‌ ಮಾಡಿದ್ದಾಳೆ. ಬಳಿಕ ಮನೆಗೆ ಬಂದು ವಿಷಯ ತಿಳಿಸಿದಳು. ಮನೆಯವರು ಸುಳ್ಯ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪೋಲಿಸರು ಯುವಕನನ್ನು ಕರೆ ತಂದು ವಿಚಾರಣೆ ನಡೆಸಿದ್ದಾರೆ.

ಘಟನೆಯ ಬಗ್ಗೆ ತಿಳಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಠಾಣೆಯೆದುರು ಜಮಾಯಿಸಿದ ಘಟನೆ ನಡೆದಿದೆ.

Leave a Comment

Your email address will not be published. Required fields are marked *