Ad Widget .

ಬೀದರ್: ಮತದಾನದ ವಿಡಿಯೋ ಚಿತ್ರೀಕರಿಸಿದ ಬಿಜೆಪಿ ಅಭಿಮಾನಿ

ಸಮಗ್ರ ನ್ಯೂಸ್‌ : ಮತಗಟ್ಟೆಯಲ್ಲಿ ಮತದಾರರೊಬ್ಬರು ಮತ ಹಾಕುವುದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುರುವ ಘಟನೆ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ನಡೆದಿದೆ.

Ad Widget . Ad Widget .

ಮೊದಲಿಗೆ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಮುಂದಿನ ಬಟನ್ ಒತ್ತಿದ್ದಂತೆ ಮಾಡುವ ಮತದಾನ ನಂತರ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾಗೆ ಮತ ಹಾಕಿ ಸನ್ನೆ ಮಾಡಿದ್ದಾರೆ.

Ad Widget . Ad Widget .

ಇನ್‌ಸ್ಟಾಗ್ರಾಂನಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಯಾರಿಗೆ ಮತದಾನ ಮಾಡಲಾಗಿದೆ ಎಂಬುದುನ್ನು ಸ್ಪಷ್ಟವಾಗಿ ತೋರಿಸಲಾಗಿದೆ.

ಕಾನೂನಿನ ಪ್ರಕಾರ ಮತಗಟ್ಟೆಯೊಳಗೆ ಮೊಬೈಲ್ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಆದರೆ, ಮತದಾರ ಮತಗಟ್ಟೆಯೊಳಗೆ ಹೇಗೆ ಮೊಬೈಲ್ ತೆಗೆದುಕೊಂಡು ಹೋದರು ಎಂಬ ಚರ್ಚೆ ಕ್ಷೇತ್ರದಲ್ಲಿ ನಡೆದಿದೆ. ಇನ್ನೂ, ರಾಜ್ಯದಲ್ಲಿ ಮತದಾನ ಮಾಡಿದವಿಡಿಯೋಗಳನ್ನು ಹಂಚಿಕೊಳ್ಳುತ್ತಿರುವುದು ಇದೇ ಮೊದಲಲ್ಲ. ವಿಧಾನಸಭಾ ಚುನಾವಣೆ ವೇಳೆಯೂ ಹಲವು ಮತದಾನದ ವಿಡಿಯೋ ಮಾಡಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದರು.

Leave a Comment

Your email address will not be published. Required fields are marked *