Ad Widget .

ಸುರಪುರ ಉಪಚುನಾವಣೆ ಮತದಾನದ ವೇಳೆ ಹೈಡ್ರಾಮಾ! ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ

ಸಮಗ್ರ ನ್ಯೂಸ್: ಯಾದಗಿರಿಯ ಸುರಪುರ ಉಪಚುನಾವಣೆ ಮತದಾನದ ವೇಳೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ಶುರುವಾಗಿದೆ. ಪರಸ್ಪರ ಎರಡು ಪಕ್ಷದ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ.

Ad Widget . Ad Widget .

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮತದಾನದ ವೇಳೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳವು ವಿಕೋಪಕ್ಕೆ ತಿರುಗಿದೆ. ಈ ವೇಳೆ ಕಲ್ಲು ತೂರಾಟ ನಡೆಸಿದ್ದಾರೆ. ಆ ಸಂಧರ್ಭದಲ್ಲಿ ಓರ್ವನ ತಲೆಗೆ ಗಂಭೀರ ಗಾಯವಾಗಿದೆ.
ಇದರಿಂದ ಗ್ರಾಮದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ‌ ದೌಡಾಯಿಸಿ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು. ಸುರಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ad Widget . Ad Widget .

Leave a Comment

Your email address will not be published. Required fields are marked *