Ad Widget

ಹವಾಮಾನ ವರದಿ| ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಪರಿಣಾಮ| ರಾಜ್ಯದಲ್ಲಿ ಐದು‌ ದಿನ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget . Ad Widget . Ad Widget . Ad Widget . Ad Widget . Ad Widget

ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ಹಳೆ ಮೈಸೂರು ಭಾಗದಲ್ಲಿ ಭಾರಿ ಗಾಳಿ ಸಹಿತ ಮಳೆಯಾಗುವ ಸಂಭವ ಇದೆ. ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವುದರಿಂದ ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕದ ಹಲವು ಭಾಗದಲ್ಲಿ ಮಳೆಯಾಗಲಿದೆ.

Ad Widget . Ad Widget .

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು, ಹಾಸನ, ಮೈಸೂರು, ರಾಮನಗರ, ಚಾಮರಾಜನಗರ, ಮಂಡ್ಯ ಮೊದಲಾದ ಕಡೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಇನ್ನು ರಾಜ್ಯದಲ್ಲಿ ಮೇ 6ರಿಂದ 10ರವರೆಗೆ ಉತ್ತಮ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಹೇಳಿದೆ. ಮೇ 6ರಂದು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಕಡೆಗಳಲ್ಲಿ ಶಾಖದ ಅಲೆ ಹೆಚ್ಚಿರಲಿದೆ ಅಂತ ಇಲಾಖೆ ತಿಳಿಸಿದೆ.

Leave a Comment

Your email address will not be published. Required fields are marked *