ಬೆಳ್ತಂಗಡಿ: ಮಾಜಿ ಶಾಸಕ ಕೆ.ವಸಂತ ಬಂಗೇರ ಇನ್ನಿಲ್ಲ

ಸಮಗ್ರ ನ್ಯೂಸ್: ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯಲ್ಲಿ ಐದು ಬಾರಿ ಗೆದ್ದು ಶಾಸಕರಾಗಿದ್ದ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

Ad Widget ... ..

ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

Ad Widget

ಇಂದು ಸಂಜೆ (ಮೇ.8) ಅವರು ಕೊನೆಯುಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Leave a Comment

Your email address will not be published. Required fields are marked *