ಸಮಗ್ರ ನ್ಯೂಸ್ : 13 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಮಗುವಿನ ಡಿಎನ್ಎ ಪರೀಕ್ಷೆ ಮೂಲಕ ಅಪರಾಧಿ ಯಾರೆಂದು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ಸದು, ಅನುಮಾನದ ಮೇರೆಗೆ ಇಬ್ಬರನ್ನು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ.
ಮಾಹಿತಿಯ ಪ್ರಕಾರ, ತಾಯಿ ಮತ್ತು ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಬಾಲಕಿಯ ತಾಯಿ ಮಗುವನ್ನು ಸಾಕಲು ನಿರಾಕರಿಸಿದ ಕಾರಣ ಶಿಶು ಕಲ್ಯಾಣ ಸಮಿತಿಯು ಮಗುವನ್ನು ತೆಗೆದುಕೊಳ್ಳಲು ನಿರ್ಧರಿಸಿದೆ.
ಪೊಲೀಸರು ಅನುಮಾನದ ಮೇರೆಗೆ ಆಕೆಯ ಸಹೋದರ ಮತ್ತು ನೆರೆಹೊರೆಯ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಅವರ ಹೇಳಿಕೆಯ ಆಧಾರಿಸಿ ತನಿಖೆ ಮುಂದುವರೆದಿದೆ.
ಬಾಲಕಿಯ ದೇಹದಲ್ಲಿ ಬದಲಾವಣೆ ಗಮನಿಸಿದ ಸಂತ್ರಸ್ತೆ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಸದ್ಯ ಪೊಲೀಸರು ತನಿಖೆ ಚುರುಗೊಳಿಸಿದ್ದಾರೆ. ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.