Ad Widget

ಹಿರಿಯ ಜಾನಪದ ವಿದ್ವಾಂಸ ಡಾ| ಪಾಲ್ತಾಡಿ‌ ರಾಮಕೃಷ್ಣ ಆಚಾರ್ ವಿಧಿವಶ

ಸಮಗ್ರ ನ್ಯೂಸ್: ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರೂ ಆಗಿದ್ದ ನಿವೃತ್ತ ಉಪನ್ಯಾಸಕ ಡಾ|ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರು ವಿಧಿವಶರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.

Ad Widget . Ad Widget . Ad Widget . Ad Widget . Ad Widget . Ad Widget

ಪೆರುವಾಜೆಯಲ್ಲಿರುವ ತಮ್ಮ ಮಗಳ ಮನೆಯಲ್ಲಿದ್ದ ಆಚಾರ್‌ ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರು ಉಂಟಾಗಿತ್ತು. ತಕ್ಷಣ ಅವರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತಾದರೂ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ. ಅವರ ಮೃತದೇಹವನ್ನು ಪುತ್ತೂರಿನ ಸಿಟಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಇಂದು ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Ad Widget . Ad Widget .

ಮಕ್ಕಳ ಕವನ ಸಂಕಲನ, ಕಥಾ ಸಂಕಲನ, ಸಂವಹನ ಮಾಧ್ಯಮವಾಗಿ ಜಾನಪದ, ಜಾನಪದ ಪರಿಸರ, ಜಾನಪದ ವೈದ್ಯ, ಜಾನಪದ ಕುಣಿತ, ದೈವಾರಾಧನೆ, ತುಳುನಾಡಿನ ಸಮಗ್ರ ಪ್ರದರ್ಶನ ಕಲೆ ಮತ್ತು ಸಾಕಷ್ಟು ಧ್ವನಿಸುರುಳಿಗಳಿಗೆ ಸಾಹಿತ್ಯವನ್ನು ಒದಗಿಸಿದ ಪಾಲ್ತಾಡಿ ತುಳು ಭಾಷೆಯ ಬೆಳವಣಿಗೆಯಲ್ಲಿ ವಿಶೇಷ ಪಾತ್ರವಹಿಸಿದರು. ತುಳು ಜಾನಪದ ಕೂಡುಕಟ್ಟು ಅಧ್ಯಕ್ಷರಾಗಿ, ತುಳು ಅಕಾಡಮಿ ರಿಜಿಸ್ಟ್ರಾರ್‌ ಆಗಿ, ಬಾಲವನ ಅಭಿವೃದ್ಧಿ ಸಮಿತಿ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಸಾರ್ವಜನಿಕ ಆಟಿ ಉತ್ಸವ, ಕೆಡ್ಡಸ ಕೂಟವನ್ನು ಪರಿಚಯಿಸಿದ ಹಿರಿಮೆ ಇವರದ್ದು. ಪಠ್ಯಪುಸ್ತಕ ರಚನಾ ಸಮಿತಿ ಸದಸ್ಯರಾಗಿ, ತುಳು ಡಿಪ್ಲೊಮಾ ಕೋರ್ಸ್‌ಗಳಿಗೆ ಪಠ್ಯ ರಚನೆಕಾರರಾಗಿ, ತುಳು ಭಾಷೆಯನ್ನು ಎಂಟನೇ ಪರಿಚ್ಛೇದ ಸೇರಿಸಬೇಕು ಎಂಬ ಆಗ್ರಹದಲ್ಲಿ ಮುಂಚೂಣಿಯಲ್ಲಿ ನಿಂತು ಶ್ರಮಿಸಿದವರು.

Leave a Comment

Your email address will not be published. Required fields are marked *