Ad Widget

ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಾ ಇದ್ದೀರಾ? ಹಾಗಾದ್ರೆ ಇಲ್ಲಿದೆ ನಿಮಗಾಗಿ ಅವಕಾಶ

ಸಮಗ್ರ ಉದ್ಯೋಗ: ಟೆಕ್ಸ್​ಟೈಲ್ಸ್​ ಕಮಿಟಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 40 ಪ್ರಾಜೆಕ್ಟ್​ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 31, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್/ಪೋಸ್ಟ್​ ಮೂಲಕ ಅಪ್ಲೈ ಮಾಡಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.

Ad Widget . Ad Widget . Ad Widget . Ad Widget . Ad Widget . Ad Widget

ಶೈಕ್ಷಣಿಕ ಅರ್ಹತೆ:
ಟೆಕ್ಸ್​ಟೈಲ್ಸ್​ ಕಮಿಟಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಟೆಕ್ಸ್​ಟೈಲ್​ ಟೆಕ್ನಾಲಜಿಯಲ್ಲಿ ಬಿ.ಎಸ್ಸಿ, ಬಿ.ಟೆಕ್ ಪೂರ್ಣಗೊಳಿಸಿರಬೇಕು.

Ad Widget . Ad Widget .

ವಯೋಮಿತಿ:
ಟೆಕ್ಸ್​ಟೈಲ್ಸ್​ ಕಮಿಟಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್​ 31, 2024ಕ್ಕೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಮಾಸಿಕ ₹ 26,000

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಜವಳಿ ಸಮಿತಿ
FKCCI
WTC ಕಟ್ಟಡ
1 ನೇ ಮಹಡಿ
ಕೆಂಪೇಗೌಡ ರಸ್ತೆ
ಬೆಂಗಳೂರು – 560009

Leave a Comment

Your email address will not be published. Required fields are marked *