Ad Widget .

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ಉದ್ಯೋಗವಿದೆ, ತಿಂಗಳಿಗೆ 2 ಲಕ್ಷ ಸಂಬಳ!

ಸಮಗ್ರ ಉದ್ಯೋಗ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್​ ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡಲು ನೇಮಕಾತಿ ನಡೆಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಹುದ್ದೆಗೆ ಅರ್ಜಿ ಹಾಕಬಹುದು. ಜುಲೈ 6, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತರು ಆಫ್​ಲೈನ್ ಮೂಲಕ ಅರ್ಜಿ ಹಾಕಿ.

Ad Widget . Ad Widget .

ಹುದ್ದೆಯ ಮಾಹಿತಿ:
ಡೈರೆಕ್ಟರ್-2
ಅಸಿಸ್ಟೆಂಟ್ ಡೈರೆಕ್ಟರ್- 1

Ad Widget . Ad Widget .

ಶೈಕ್ಷಣಿಕ ಅರ್ಹತೆ:
ಡೈರೆಕ್ಟರ್- ತಿಳಿಸಿಲ್ಲ.
ಅಸಿಸ್ಟೆಂಟ್ ಡೈರೆಕ್ಟರ್- ಎಂಜಿನಿಯರಿಂಗ್​ ಪದವಿ, ಕಂಪ್ಯೂಟರ್ ಅಪ್ಲಿಕೇಶನ್​ನಲ್ಲಿ ಸ್ನಾತಕೋತ್ತರ ಪದವಿ

ವಯೋಮಿತಿ:
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 6, 2024ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಡೈರೆಕ್ಟರ್- 1,23,100-2,15,900
ಅಸಿಸ್ಟೆಂಟ್ ಡೈರೆಕ್ಟರ್- ಮಾಸಿಕ ₹ 78,800-2,09,200

ಉದ್ಯೋಗದ ಸ್ಥಳ:
ಲಕ್ನೋ
ಬೆಂಗಳೂರು

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ನಿರ್ದೇಶಕರು (HR)
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI)
4 ನೇ ಮಹಡಿ
ಬಾಂಗ್ಲಾ ಸಾಹಿಬ್ ರಸ್ತೆ
ಕಾಳಿ ಮಂದಿರದ ಹಿಂದೆ
ಗೋಲ್ ಮಾರ್ಕೆಟ್
ನವದೆಹಲಿ-110001

Leave a Comment

Your email address will not be published. Required fields are marked *