ಸಮಗ್ರ ನ್ಯೂಸ್: 2023-24 ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ ಗುರುವಾರ ಪ್ರಕಟವಾಗಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು.
ಈ ಬಾರಿ ಉಡುಪಿ ಜಿಲ್ಲೆ ಫಲಿತಾಂಶದಲ್ಲಿ ಪ್ರಥಮ ಸ್ಥಾನವನ್ನು ಶೇಕಡ 94 ರೊಂದಿಗೆ ಪಡೆದುಕೊಂಡಿದೆ. ದ. ಕನ್ನಡ ಜಿಲ್ಲೆಗೆ ದ್ವೀತಿಯ ಸ್ಥಾನವನ್ನು ಪಡೆದುಕೊಂಡಿದೆ. ಅದು ಶೇ 92.12 ಪಡೆದುಕೊಂಡಿದೆ. ಯಾದಗಿರಿ ಜಿಲ್ಲೆಗೆ ಕೊನೆ ಸ್ಥಾನ ಪಡೆದುಕೊಂಡಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದ್ದಾರೆ. ಓರ್ವ ವಿದ್ಯಾರ್ಥಿನಿ ಮಾತ್ರ ಈ ಬಾರಿ 625ಕ್ಕೆ 625 ಅಂಕಗಳನ್ನು ತೆಗೆದುಕೊಂಡಿದ್ದಾರೆ. ಇನ್ನೂ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 631204 ವಿದ್ಯಾರ್ಥಿಗಳು ಪಾಸಾಗಿದ್ದಾರೆ,
ಫಲಿತಾಂಶವನ್ನು https://karresults.nic.in/ ವೆಬ್ಸೈಟ್ ನಲ್ಲಿ ವೀಕ್ಷಿಸಬಹುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಈ ಲಿಂಕ್ ಬಳಸಿಯೂ ರಿಸಲ್ಟ್ ನೋಡಬಹುದು.
https://kseab.karnataka.gov.in
https://karresults.nic.in
https://sslc.karnataka.gov.in