ಬೆಳಗಾವಿಯಲ್ಲಿ ಅಪಘಾತ; ತಮಿಳು ಕಾರ್ಮಿಕ ಮುಖಂಡ ಶಿವಕುಮಾರ್ ಕೌಡಿಚ್ಚಾರ್ ದುರ್ಮರಣ

ಸಮಗ್ರ ನ್ಯೂಸ್: ತಮಿಳು ಕಾರ್ಮಿಕ ಮುಖಂಡ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಮಾಜಿ ಅಧ್ಯಕ್ಷ ಶಿವಕುಮಾರ್ ಕೌಡಿಚ್ಚಾರ್ ಇಂದು ಬೆಳಗಾವಿಯಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.

Ad Widget ... ..

ತುರ್ತು ಕೆಲಸದ ನಿಮಿತ್ತ ಬೆಳಗಾವಿಗೆ ತೆರಳಿದ್ದ ಶಿವಕುಮಾರ್, ಬೆಳಗಾವಿಯ ಖಾನಾಪುರ ಎಂಬಲ್ಲಿ ಇವರು ಚಲಾಯಿಸುತ್ತಿದ್ದ ಬೈಕ್ ಡಿವೈಡರ್ ಗೆ ಢಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

Ad Widget

ತಮಿಳು ಮುಖಂಡರಾಗಿ ಕಾಂಗ್ರೆಸ್ ಕಾರ್ಮಿಕ ಸಂಘಟನೆಯಲ್ಲಿ‌ ಗುರುತಿಸಿಕೊಂಡಿದ್ದ ಇವರ ಅಗಲಿಕೆಯು ಇದೀಗ ತಮಿಳು ಸಮುದಾಯವನ್ನು ದಿಗ್ಭ್ರಮೆಗೊಳಿಸಿದೆ.

Leave a Comment

Your email address will not be published. Required fields are marked *