Ad Widget .

ಹಾಸನ ವಿಡಿಯೋ ಪ್ರಕರಣ| ಸುಳ್ಳು ದೂರು ನೀಡುವಂತೆ ಒತ್ತಡ

ಸಮಗ್ರ ನ್ಯೂಸ್‌ : ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ ಮಧ್ಯೆ ಅಶ್ಲೀಲ ವಿಡಿಯೋ ಕೇಸ್‌ಗೆ ಮತ್ತೊಂದು ಬಿಗ್‌ ಟ್ವಿಸ್ಟ್ ಸಿಕ್ಕಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ದೂರು ಕೊಡಲು ಮಹಿಳೆ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

Ad Widget . Ad Widget .

ಪ್ರಜ್ವಲ್ ರೇವಣ್ಣ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಇದೇ ವಿಚಾರಕ್ಕೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆಯೊಬ್ಬರು ದೂರು ನೀಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Ad Widget . Ad Widget .

‘ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಒತ್ತಡ ಹೇರಲಾಗುತ್ತಿದೆ ಅಂತ ಮಹಿಳೆ ಆರೋಪಿಸಿದ್ದಾರೆ. ಪೊಲೀಸರು ಎಂದು ಹೇಳಿಕೊಂಡು ಬಂದ ಮೂವರು ಬೆದರಿಕೆ ಹಾಕಿದ್ದಾರೆ. ಸಿವಿಲ್ ಡ್ರೆಸ್ನಲ್ಲಿ ಬಂದು ಸುಳ್ಳು ದೂರು ನೀಡುವಂತೆ ಒತ್ತಾಯ ಹೇರಿದ್ದರಂತೆ. ಅಲ್ಲದೇ ಬೇರೆ, ಬೇರೆ ನಂಬರ್ಗಳಿಂದ ಮಹಿಳೆಗೆ ನಿರಂತರ ಫೋನ್ ಕರೆ ಮಾಡಿ ಬೆದರಿಕೆ ಹಾಕ್ತಿದ್ದಾರೆ ಅಂತ ಮಹಿಳೆ ನೀಡಿರುವ ದೂರಿನ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗ ಮಾಹಿತಿ ನೀಡಿದೆ.

ಎಸ್‌ಐಟಿ ತನಿಖೆ ಬಗ್ಗೆ ಬಿಜೆಪಿ-ಜೆಡಿಎಸ್‌ ಅನುಮಾನವನ್ನು ವ್ಯಕ್ತಪಡಿಸುತ್ತಿದೆ. ಈ ಹೊತ್ತಲ್ಲಿ ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದು ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಟ್ವಿಸ್ ಕೊಟ್ಟಿದ್ದು, ಸಂತ್ರಸ್ತ ಮಹಿಳೆಯರನ್ನೇ ಅನುಮಾನದ ಕಣ್ಣಿನಿಂದ ನೋಡುವಂತಾಗಿದೆ.

Leave a Comment

Your email address will not be published. Required fields are marked *