Ad Widget .

ಹತ್ತನೇ ತರಗತಿ ಹುಡುಗಿಯ ರುಂಡ ಕತ್ತರಿಸಿದಾತ ಅರೆಸ್ಟ್

ಸಮಗ್ರ ನ್ಯೂಸ್: ತನ್ನ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯೊಬ್ಬಳನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ಗುರುವಾರ ನಡೆದು ರಾಜ್ಯವೇ ಬೆಚ್ಚಿ ಬಿದ್ದಿತ್ತು. ಇದೀಗ ಈ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹತ್ತನೇ ಕ್ಲಾಸ್‌ ಓದುತ್ತಿದ್ದ ಅಪ್ರಾಪ್ತೆ ಮೀನಾಳನ್ನು ಕೊಲೆ ಮಾಡಿದ್ದ ಆರೋಪಿ ಪ್ರಕಾಶ್‌ ಪತ್ತೆಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ.

Ad Widget . Ad Widget .

ಬಾಲಕಿಯನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಪ್ರಕಾಶ್‌ ಕಾಡಿನಲ್ಲಿ ಪತ್ತೆಯಾಗಿದ್ದಾನೆ. ಸದ್ಯ ಆತನನ್ನು ಸೋಮವಾರಪೇಟೆ ಠಾಣೆಗೆ ಪೊಲೀಸರು ಕರೆ ತರುತ್ತಿದ್ದಾರೆ. ಬಾಲಕಿಯನ್ನು ಹತ್ಯೆ ಮಾಡಿದ ಬಳಿಕ ಈತ ರುಂಡ ಹಾಗೂ ಕೋವಿಯೊಂದಿಗೆ ಪರಾರಿಯಾಗಿದ್ದ. ಶುಕ್ರವಾರ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿತ್ತು. ಬಳಿಕ ಪೊಲೀಸರು ಸ್ಪಷ್ಟನೆ ನೀಡಿ ಆತ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ತಿಳಿಸಿದ್ದರು. ಇದೀಗ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

Ad Widget . Ad Widget .

ಏನಿದು ಪ್ರಕರಣ?
ಮೀನಾ ಇನ್ನೂ ಹತ್ತನೇ ಕ್ಲಾಸ್‌ ಓದುತ್ತಿದ್ದ ಅಪ್ರಾಪ್ತೆ ಆಗಿದ್ದಳು. ಹೀಗಾಗಿ ಗುರುವಾರ ಮಧ್ಯಾಹ್ನ ಪೊಲೀಸರ ಸಮ್ಮುಖದಲ್ಲಿ ಮದುವೆ ನಿಶ್ಚಿತಾರ್ಥ ರದ್ದಾಗಿತ್ತು. ಸಂಜೆ ವೇಳೆ ಆಕೆಯ ಮನೆಗೆ ನುಗ್ಗಿದ ಆರೋಪಿ ಪ್ರಕಾಶ್‌ ಮೀನಾಳನ್ನು ಎಳೆದೊಯ್ದು ಕತ್ತು ಕೊಯ್ದಿದ್ದ. ನಂತರ ದೇಹವನ್ನು ಬಿಸಾಡಿ ರುಂಡ ಕೊಂಡೊಯ್ದಿದ್ದ. ಭೀಕರ ಘಟನೆಯು ಸುತ್ತಲಿನ ಜನರನ್ನು ಬೆಚ್ಚಿ ಬೀಳಿಸಿತ್ತು.

ಆಕೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದು ಗುರುವಾರವಷ್ಟೇ ಫಲಿತಾಂಶ ಪ್ರಕಟಗೊಂಡಿತ್ತು. ಇದೇ ವೇಳೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಮೀನಾ ಮದುವೆ ನಿಶ್ಚಿತಾರ್ಥವನ್ನು ರದ್ದು ಮಾಡಲಾಗಿತ್ತು. ಪೊಲೀಸರೇ ಮುಂದೆ ನಿಂತು ಮದುವೆಯನ್ನು ಕೊನೆಗೊಳಿಸಿದ್ದರು. ಆದರೆ ಸಂಜೆ ವೇಳೆಗೆ ಆಕೆಯನ್ನು ಎಳೆದೊಯ್ದು ಪ್ರಕಾಶ್‌ ಕೊಲೆ ಮಾಡಿದ್ದ.

ಬಾಲಕಿಯನ್ನು ಆರೋಪಿ ಪ್ರಕಾಶ್‌ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ, ಅವರ ಮದುವೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ಬಾಲಕಿಗೆ ಮದುವೆಯ ಕಾನೂನುಬದ್ಧ ವಯಸ್ಸಾಗದ ಕಾರಣ ಪೊಲೀಸರು ಅದಕ್ಕೆ ತಡೆಯೊಡ್ಡಿದ್ದರು ಎನ್ನಲಾಗಿದೆ. ಇದರಿಂದ ಆರೋಪಿ ಕೆರಳಿದ್ದ. ಸಂಜೆ ವೇಳೆ ಬಾಲಕಿಯ ಮನೆಗೆ ನುಗ್ಗಿದ ಆತ ಅಲ್ಲಿಂದ ಎಳೆದೊಯ್ದಿದ್ದ. ಬಳಿಕ ಕತ್ತು ಕತ್ತರಿಸಿ ಕೊಲೆ ಮಾಡಿ ರುಂಡವನ್ನು ತೆಗೆದುಕೊಂಡು ಹೋಗಿದ್ದ.

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಗುರುವಾರವಷ್ಟೇ ಫಲಿತಾಂಶ ಪ್ರಕಟಿಸಿತ್ತು. ಅಂತೆಯೇ ಸುರ್ಲಬ್ಬಿ ಸರ್ಕಾರಿ ಹೈಸ್ಕೂಲ್​ನ ಏಕೈಕ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಮೀನಾ ಪರೀಕ್ಷೆಯಲ್ಲಿ ಪಾಸಾಗಿದ್ದರು. ಆಕೆ ತೇರ್ಗಡೆಗೊಂಡಿರುವ ಸಂಗತಿ ಶಾಲಾ ಅಧ್ಯಾಪಕರಿಗೆ ಸಂತಸ ತಂದಿದ್ದು. ಅಲ್ಲದೆ ಶಾಲೆಯಲ್ಲಿ ಶೇಕಡಾ 100 ಫಲಿತಾಂಶ ಬಂದಿತ್ತು. ಆದರೆ ಸಂಜೆಯ ವೇಳೆಗೆ ಬಾಲಕಿ ಭಯಾನಕವಾಗಿ ಕೊಲೆಯಾಗಿದ್ದಳು.

Leave a Comment

Your email address will not be published. Required fields are marked *