ಸಮಗ್ರ ನ್ಯೂಸ್: ಮಹಾರಾಷ್ಟ್ರದ ಸಾಂಗೋಲಾ- ಜತ್ತ ಮಾರ್ಗದ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿ ಮೂವರು ಮಹಿಳೆಯರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ನಿವಾಸಿಗಳಾದ ಮಹಾದೇವಿ ಚೌಗಲಾ, ಮತ್ತು ಗೀತಾ ದೋಡಮನಿ, ಹಾಗೂ ಮಲಾಬಾದ ಗ್ರಾಮದ ಕಸ್ತೂರಿ ತಾವಂಶಿ ಎಂದು ಗುರುತಿಸಲಾಗಿದೆ.

ಬಳ್ಳಿಗೇರಿ ಗ್ರಾಮದಿಂದ ಮಹಾರಾಷ್ಟ್ರಕ್ಕೆ ದ್ರಾಕ್ಷಿ ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಕ್ರೂಸರ್ ವಾಹನದ ಎಡಬದಿಯ ಟೈರ್ ಬ್ಲ್ಯಾಸ್ಟ್ ಆಗಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೆ ಸಾವನಪ್ಪಿದರೆ, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಹಲವರಿಗೆ ಗಂಭಿರ ಗಾಯಗಳಾಗಿದೆ.
ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ಸ್ಥಳೀಯ ಸಾಂಗೊಲಾ ಮತ್ತು ಮಹಾರಾಷ್ಟ್ರದ ಮಿರಜ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.