ಕೆಐಎಡಿಬಿ ಅಧಿಕಾರಿ ಪತ್ನಿ ನಿಗೂಢ ಸಾವು| ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಸಮಗ್ರ ನ್ಯೂಸ್: ಬೆಂಗಳೂರಿನ ಸಂಜಯನಗರದಲ್ಲಿ ಹೈಕೋರ್ಟ್‌ ವಕೀಲೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಚೈತ್ರಾ ಮೃತ ದುರ್ದೈವಿ. ಇಕೆಯ ಪತಿ ಕೆಐಎಡಿಬಿ ಅಧಿಕಾರಿ ಆಗಿದ್ದು, ಮನೆಯ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಪತಿ ಶಿವಕುಮಾರ್‌ ಹೊರಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ವಾಪಸ್‌ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.

. Ad Widget . Ad Widget

2016ರಲ್ಲಿ ಶಿವಕುಮಾರ್ ಹಾಗೂ ಚೈತ್ರಾ ಮದುವೆಯಾಗಿದ್ದರು. ದಂಪತಿಗೆ 5 ವರ್ಷದ ಒಂದು ಮಗು ಇದೆ. ಇವರು ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದರು. ಚೈತ್ರಾ ಹೈಕೋರ್ಟ್ ವಕೀಲೆ ಆಗಿದ್ದರೆ, ಶಿವಕುಮಾರ್ ಕೆಐಡಿಬಿಯಲ್ಲಿ ಉಪವಿಭಾಗಾಧಿಕಾರಿ ಆಗಿದ್ದರು. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

. Ad Widget . . Ad Widget . Ad Widget

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್‌ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು,‌ ಪೊಲೀಸರು ಪ್ರಕರಣದ ತನಿಖೆಯನ್ನು ಕೈಗೊಂಡಿದ್ದಾರೆ.

Leave a Comment

Your email address will not be published. Required fields are marked *