Ad Widget .

ಎನ್.ಡಿ.ಎ/ಎನ್.ಎ-1 ಲಿಖಿತ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ 4 ವಿದ್ಯಾರ್ಥಿಗಳು ಆಯ್ಕೆ

ಸಮಗ್ರ ನ್ಯೂಸ್: ನ್ಯಾಶನಲ್ ಡಿಫೆನ್ಸ್ ಅಕಾಡೆಮಿ ಹಾಗೂ ನೇವಲ್ ಅಕಾಡೆಮಿಯವರು ಎ. 21ರಂದು ನಡೆಸಿದ ಅತ್ಯಂತ ಕಠಿಣಕರವಾದ ಎನ್.ಡಿ.ಎ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

Ad Widget . Ad Widget .

ನ್ಯಾಶನಲ್ ಡಿಫೆನ್ಸ್ ಅಕಾಡೆಮಿಯವರು ನಡೆಸುವ ರಾಷ್ಟ್ರಮಟ್ಟದ ಅತೀ ಕಷ್ಟಕರವಾದ ಪರೀಕ್ಷೆ ಇದಾಗಿದ್ದು ಕ್ರಿಯೇಟಿವ್ ವಿದ್ಯಾರ್ಥಿ ನೇಹಾ ಕೆ. ಉದಪುಡಿ, ಸುಧೀಶ್ ಕೆ.ಆರ್. ಶೆಟ್ಟಿ, ಸುಜಿತ್ ಡಿ.ಕೆ., ವರ್ಷ ಹೆಚ್.ವಿ. ಲಿಖಿತ ಪರೀಕ್ಷೆಯಲ್ಲಿ ತೆರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿರುತ್ತಾರೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕ್ರಿಯೇಟಿವ್ ಕಾಲೇಜಿನ ಪ್ರಾಶುಂಪಾಲ ವಿದ್ವಾನ್ ಗಣಪತಿ ಭಟ್, ಆಡಳಿತ ಮಂಡಳಿಯವರು, ಉಪನ್ಯಾಸಕ ವರ್ಗ, ಎನ್.ಡಿ.ಎ/ಎನ್.ಎ ಸಂಯೋಜಕ ಸುಮಂತ್ ದಾಮ್ಲೆ ಅಭಿನಂದಿಸಿ ಶುಭ ಹಾರೈಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *