Ad Widget .

ಕಿರುತೆರೆ ನಟಿ ಪವಿತ್ರ ಜಯರಾಂ ಅಪಘಾತದಲ್ಲಿ ಸಾವು

ಸಮಗ್ರ ನ್ಯೂಸ್: ಕನ್ನಡ ಮತ್ತು ತೆಲುಗು ಧಾರವಾಹಿಗಳಲ್ಲಿ ನಟಿಸಿ ಜನಪ್ರಿಯರಾಗಿರುವ ಕನ್ನಡತಿ ಪವಿತ್ರ ಜಯರಾಂ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ಕರ್ನೂಲು ಸಮೀಪದಲ್ಲಿ ಇಂದು ಮುಂಜಾನೆ ಅಪಘಾತವಾಗಿದೆ ಎಂದು ವರದಿಯಾಗಿದೆ.

Ad Widget . Ad Widget .

ಇವರು ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು. ಇವರು ಹೆಚ್ಚು ಫೇಮಸ್‌ ಆದದ್ದು ತೆಲುಗಿನ ‘ತ್ರಿನಯನಿ’ ಧಾರಾವಾಹಿಯಿಂದ . ಈ ಬಗ್ಗೆ ನಟಿ ಈ ಹಿಂದೆ ಮಾಧ್ಯಮವೊಂದರಲ್ಲಿ ಹೇಳಿಕೊಂಡಿದ್ದರು.

Ad Widget . Ad Widget .

ʻʻನಾನು ಹುಟ್ಟಿ ಬೆಳೆದದ್ದು ಕರ್ನಾಟಕದಲ್ಲಿ. ಆದರೆ ಕನ್ನಡಕ್ಕಿಂತ ನನಗೆ ಹೆಚ್ಚು ಹೆಸರು ಕೊಟ್ಟಿದ್ದು ತೆಲುಗು. ‘ತ್ರಿನಯನಿ’ ಧಾರಾವಾಹಿ ಮುಂಚೆ ಅನೇಕ ಕನ್ನಡ ಧಾರಾವಾಹಿಯಲ್ಲಿ ನಟಿಸಿದ್ದರು ಅಷ್ಟಾಗಿ ಫಾಲೋವರ್ಸ್‌ ಇರಲಿಲ್ಲ. ಆದರೆ ‘ತ್ರಿನಯನಿ’ ಧಾರಾವಾಹಿ ಕನ್ನಡದಲ್ಲಿಯೂ ಡಬ್‌ ಆಗುತ್ತಿತ್ತು. ಹೀಗಾಗಿ ಕನ್ನಡದಲ್ಲಿಯೂ ತುಂಬಾ ಫ್ಯಾನ್ ಪೇಜ್‌ಗಳು ಶುರುವಾದವುʼʼಎಂದಿದ್ದರು.

Leave a Comment

Your email address will not be published. Required fields are marked *