Ad Widget .

ಬೆಂಗಳೂರಿನ 6 ಆಸ್ಪತ್ರೆಗಳಿಗೆ ಹುಸಿಬಾಂಬ್ ಬೆದರಿಕೆ ಮೇಲ್: ಪೊಲೀಸರಿಂದ ತಪಾಸಣೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಆಗಾಗೆ ಹುಸಿಬಾಂಬ್ ಬೆದರಿಕೆ ಕರೆಗಳು ಬರುವುದು ಸಾಮಾನ್ಯ. ಅದರಂತೆ ಇಂದು ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್​ ಬಂದಿದೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ ನಾರಾಯಣ ಹೆಲ್ತ್ , ಸಾಗರ್ ಆಸ್ಪತ್ರೆ, ಸಮರ್ಥ, ಜೆಎಂಜೆ ಹಾಗೂ ವಿಮಲಾಲಯ್ಯ ಆಸ್ಪತ್ರೆಗಳಿಗೂ ಬಾಂಬ್ ಬೆದರಿಕೆ ಬಗ್ಗೆ ಇ ಮೇಲ್​ನಲ್ಲಿ ಉಲ್ಲೇಖಿಸಲಾಗಿದೆ.

Ad Widget . Ad Widget .

ಇನ್ನೂ ಈ ಬಾರಿ ನೇರವಾಗಿ ಬೆಂಗಳೂರು ಪೊಲೀಸರ ಇ-ಮೇಲ್ ಅಕೌಂಟ್​​ಗೆ ಬಾಂಬ್ ಬೆದರಿಕೆ ಬಂದಿದೆ. ಬಾಂಬ್ ಬೆದರಿಕೆ ಇ-ಮೇಲ್ ಹಿನ್ನೆಲೆ ಪೊಲೀಸರು ತಪಾಸಣೆ ನಡೆಸಿದ್ದು, ಈ ವೇಳೆ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ಹೀಗಾಗಿ ತಪಾಸಣೆ ನಂತರ ಹುಸಿ ಬಾಂಬ್ ಬೆದರಿಕೆ ಬಗ್ಗೆ ಪೊಲೀಸರು ದೃಢಪಡಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *