ಮೈಸೂರು: ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಬಸವನಪುರ ಗ್ರಾಮದ ಬಳಿ ನಡೆದಿದೆ.

Ad Widget ... ..

ಕರ್ಣ (19) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಪತ್ರಿಕಾ ವಿತರಕನಾಗಿ ಕರ್ಣ ಕೆಲಸ ಮಾಡುತ್ತಿದ್ದನು. ಸೂಕ್ತ ಕೆಲಸವಿಲ್ಲದೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.

Ad Widget

ವಿಷಯ ತಿಳಿದು ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ರೈಲ್ವೆ ಪೊಲೀಸರು ಪ್ರಕರಣವನ್ನು ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

Leave a Comment

Your email address will not be published. Required fields are marked *