Ad Widget .

ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗೆ ಹುಸಿ ಬಾಂಬ್ ಕರೆ

ಸಮಗ್ರ ನ್ಯೂಸ್: ದೆಹಲಿಯ ವಿಮಾನ ನಿಲ್ದಾಣ ಹಾಗೂ ಹಲವು ಆಸ್ಪತ್ರೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಇ-ಮೇಲ್‌ ಬಂದ ಬೆನ್ನಲ್ಲೇ ಬೆಂಗಳೂರಿನ ಪ್ರಮುಖ‌ ಆಸ್ಪತ್ರೆಗೆ ಹುಸಿ ಬಾಂಬ್ ಬೆದರಿಕೆ‌ ಸಂದೇಶ ಬಂದಿದ್ದರಿಂದ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಭಾನುವಾರ ನಡೆದಿದೆ.

Ad Widget . Ad Widget .

ನಾಗವಾರದ ಸೇಂಟ್ ಫಿಲೋಮಿನಾ ಆಸ್ಪತ್ರೆ‌ಯಲ್ಲಿ ಬಾಂಬ್ ಇಡಲಾಗಿದೆ ಎಂದು ಪೊಲೀಸ್ ಇಲಾಖೆಯ ಸಿಟಿ ಎಸ್.ಬಿ.ಗೆ ಇ-ಮೇಲ್ ಬಂದಿದೆ. ಹೀಗಾಗಿ ತಕ್ಷಣ ಆಸ್ಪತ್ರೆಗೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Ad Widget . Ad Widget .

ಗೋವಿಂದ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸೇಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ ಸಂಜೆ ಬಾಂಬ್‌ ಇಡಲಾಗಿದೆ ಎಂಬ ಸಂದೇಶ ಬಂದ ಕೂಡಲೇ ಅಲರ್ಟ್ ಆದ ಪೊಲೀಸರು, ಕೂಡಲೇ ಆಸ್ಪತ್ರೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಯಾವುದೇ ಬಾಂಬ್‌ ಅಥವಾ ಸ್ಫೋಟಕಗಳು ಕಾಣದಿದ್ದರಿಂದ, ಹುಸಿ‌ ಬಾಂಬ್ ಬೆದರಿಕೆ ಬಂದಿರುವುದು ಖಚಿತವಾಗಿದೆ.

Leave a Comment

Your email address will not be published. Required fields are marked *