ಮೈಸೂರು : ನೀರಿನಲ್ಲಿ ಮುಳುಗಿ ಯುವತಿ ಮೃತ್ಯು

ಸಮಗ್ರ ನ್ಯೂಸ್‌ : ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಮೃತಪಟ್ಟಿ ಘಟನೆ ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ನಡೆದಿದೆ.

Ad Widget ... ..

ಮೆಹನಾಜ್ (17) ಮೃತ ದುರ್ದೈವಿ.ಬೆಂಗಳೂರಿನ ಬನ್ನೇರುಘಟ್ಟ ನಿವಾಸಿಯಾದ ಮೆಹನಾಜ್‌ ತಲಕಾಡಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ದುರ್ಘಟನೆ ನಡೆದಿದೆ.

Ad Widget

ಈಜು ಬಾರದೆ ಇದ್ದರೂ, ನೀರಿನಲ್ಲಿ ಆಟವಾಡುಲು ನದಿಗೆ ಇಳಿದಿದ್ದಾಳೆ. ಆದರೆ ನೀರಿನ ಸೆಳತಕ್ಕೆ ಸಿಲುಕಿ ಮೃತಪಟ್ಟಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಲಕಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೀರಿನಲ್ಲಿ ಮುಳುಗಿದ್ದ ಮೃತದೇಹವನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ತಲಕಾಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *