ಸಮಗ್ರ ನ್ಯೂಸ್ : ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ ಇಂದು ನಡೆಯುತ್ತಿದೆ.. ಹೈದರಾಬಾದ್ ಬಿಜೆಪಿ ಲೋಕಸಭಾ ಅಭ್ಯರ್ಥಿ ಮಾಧವಿ ಲತಾಮತಗಟ್ಟೆಯಲ್ಲಿ ಬುರ್ಖಾ ಧರಿಸಿದ್ದ ಮತದಾರರ ಗುರುತಿನ ಚೀಟಿ ಪರಿಶೀಲನೆ ಮಾಡಿ ವಿವಾದಕ್ಕೀಡಾಗಿದ್ದಾರೆ.
ಈ ವಿಡಿಯೋ ವೈರಲ್‌ಆಗಿದ್ದು, ಪ್ರತಿಸ್ಪರ್ಧಿ ಎಐಎಂಐಎಂ ಪಕ್ಷಮುಖಂಡ ಅಸಾದುದ್ದೀನ್ ಓವೈಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಕಣಕ್ಕಿಳಿದಿರುವ ಲತಾ, ಇಂದು ಅಜಂಪುರದಲ್ಲಿರುವ ಅಮೃತ ವಿದ್ಯಾಲಯ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ವಿವಿಧ ಮತಗಟ್ಟೆಗಳಿಗೆ ಭೇಟಿ ಕೊಟ್ಟಿದ್ದರು. ಈ ವೇಳೆ ಮತಗಟ್ಟೆಯಲ್ಲಿ ಮತದಾನಕ್ಕಾಗಿ ಕಾದು ಕುಳಿತಿದ್ದ ಮುಸ್ಲಿಂ ಮಹಿಳೆಯ ಬಳಿ ಬಂದ ಲತಾ, ಮುಖಕ್ಕೆ ಧರಿಸಿದ್ದ ಹಿಜಾಬ್ ತೆಗೆಯುವಂತೆ ಹೇಳಿ ಅವರ ಗುತುತಿನ ಚೀಟಿ ಪರಿಶೀಲನೆ ಮಾಡಿದರು.
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಲೇ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಸ್ಪಷ್ಟನೆ ನೀಡಿದ್ದು, ‘ತಪ್ಪು ಭಾವನೆ ಮೂಡಿಸಲು ನನ್ನ ವಿಡಿಯೋವೊಂದನ್ನು ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದು ಅಪೂರ್ಣ ವಿಡಿಯೋ ಎಂಬುವುದನ್ನು ನಾನು ಸ್ಪಷ್ಟಪಡಿಸಲು ಇಚ್ಚಿಸುತ್ತೇನೆ. ಈ ವಿಡಿಯೋದಿಂದ ಯಾರ ಭಾವನೆಗಾದರು ಧಕ್ಕೆಯಾಗಿದ್ದರೆ, ನಾನು ಎಲ್ಲರನ್ನು ಗೌರವಿಸುವವಳಾಗಿ ಕ್ಷಮೆ ಯಾಚಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದರು.