Ad Widget .

ವಿಧಾನ ಪರಿಷತ್ ಚುನಾವಣೆ/ ಒಟ್ಟು 13 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ವಿಧಾನ ಪರಿಷತ್ ಚುನಾವಣೆಗೆ ಸೋಮವಾರ 11 ಅಭ್ಯರ್ಥಿಗಳು 17 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ. ಅಧಿಸೂಚನೆ ಪ್ರಕಟಗೊಂಡ ಬಳಿಕ ಈವರೆಗೆ 13 ಅಭ್ಯರ್ಥಿಗಳು 19 ಉಮೇದುವಾರಿಕೆ ಸಲ್ಲಿಸಿದ್ದಾರೆ.

Ad Widget . Ad Widget .

ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಅ. ದೇವೇಗೌಡ, ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಮೋಜಿಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವೈ.ಎ.ನಾರಾಯಣಸ್ವಾಮಿ, ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ.

Ad Widget . Ad Widget .

ಸೋಮವಾರ ಸಲ್ಲಿಕೆಯಾದ 17 ನಾಮಪತ್ರಗಳ ಪೈಕಿ ಬಿಜೆಪಿ 3, ಕಾಂಗ್ರೆಸ್ 2, ಜೆಡಿಎಸ್ 1, ಪಕ್ಷೇತರರ 5 ಉಮೇದುವಾರಿಕೆ ಸಲ್ಲಿಕೆಯಾಗಿವೆ. ಒಟ್ಟು ಸಲ್ಲಿಕೆಯಾದ 19 ನಾಮಪತ್ರಗಳ ಪೈಕಿ ಬಿಜೆಪಿ 3, ಕಾಂಗ್ರೆಸ್ 2, ಜೆಡಿಎಸ್ 1, ಪಕ್ಷೇತರರ 7 ನಾಮಪತ್ರಗಳು ಸಲ್ಲಿಕೆಯಾಗಿವೆ.

ಇದೇ ತಿಂಗಳು 16ರಂದು ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ. 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. 20ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಜೂ.3ರಂದು ಮತದಾನ ನಡೆಯಲಿದ್ದು, ಜೂ.6ರಂದು ಮತ ಎಣಿಕೆ ನಡೆಯಲಿದೆ.

Leave a Comment

Your email address will not be published. Required fields are marked *