Ad Widget .

ಪುತ್ತೂರು: ಬಸ್ ಮತ್ತು ಬೈಕ್ ನಡುವೆ ಅಪಘಾತ| ಸವಾರ ಸ್ಥಳದಲ್ಲೇ ದುರ್ಮರಣ

ಸಮಗ್ರ ನ್ಯೂಸ್: ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್‌ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಜೇಶ್ವರ – ಸುಬ್ರಹ್ಮಣ್ಯ ಹೆದ್ದಾರಿಯ ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ಇಂದು (ಮೇ.15) ಬೆಳಗ್ಗೆ ನಡೆದಿದೆ.

Ad Widget . Ad Widget .

ಮೃತ ವ್ಯಕ್ತಿಯನ್ನು ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕುಂಡಡ್ಕ ನಿವಾಸಿ ಮೋಕ್ಷಿತ್ ಗೌಡ (23) ಎಂದು ಗುರುತಿಸಲಾಗಿದೆ. ಮೋಕ್ಷಿತ್ ಗೌಡ ಅವರು ಪುರುಷರಕಟ್ಟೆಯಲ್ಲಿರುವ ಬಿಂದು ಫ್ಯಾಕ್ಟರಿಯಲ್ಲಿ ಸಿಫಾನ್ ಮೆಷಿನ್ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Ad Widget . Ad Widget .

ಪುರುಷರಕಟ್ಟೆಯಲ್ಲಿ ರೂಂ ಮಾಡಿಕೊಂಡು ಉಳಿದುಕೊಂಡಿದ್ದ ಮೋಕ್ಷಿತ್ ಸರ್ವಿಸ್ ಗೆ ಇಟ್ಟಿದ್ದ ತನ್ನ ಬೈಕನ್ನು ವಾಪಾಸು ತರುತ್ತಿದ್ದ ವೇಳೆ ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣೆಯ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *