Ad Widget .

ನೇಹಾ ಮಾದರಿಯಲ್ಲೇ ಮತ್ತೊಂದು ಹತ್ಯೆ| ಮತ್ತೆ ಬೆಚ್ಚಿಬಿದ್ದ ಹುಬ್ಬಳ್ಳಿ| ಆರೋಪಿ ಬಂಧನಕ್ಕೆ ಕಾರ್ಯಾಚರಣೆ ಶುರು

ಸಮಗ್ರ ವಾರ್ತೆ: ದೇಶವನ್ನೇ ಬೆಚ್ಚಿಬೀಳಿಸಿದ್ದ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್​ ಸದಸ್ಯನ ಪುತ್ರಿ ನೇಹಾ ಹಿರೇಮಠ್ ಕೊಲೆ ಪ್ರಕರಣ ಮಾಸುವ ಮುನ್ನವೇ ಅದೇ ರೀತಿಯ ಮತ್ತೊಂದು ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್​ ಠಾಣಾ ವ್ಯಾಪ್ತಿಯ ವೀರಾಪುರ ಓಣಿಯಲ್ಲಿ ಬುಧವಾರ (ಮೇ 15) ನಡೆದಿದೆ.

Ad Widget . Ad Widget .

ಕೊಲೆಯಾದ ಯುವತಿಯನ್ನು ಅಂಜಲಿ ಅಂಬಿಗೇರ (20) ಎಂದು ಗುರುತಿಸಲಾಗಿದ್ದು, ವಿಶ್ವ ಅಲಿಯಾಸ್​ ಗಿರೀಶ್​ ಎಂಬಾತ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ತಲೆಮಾರಿಸಿಕೊಂಡಿದ್ದಾನೆ. ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.

Ad Widget . Ad Widget .

ಆರೋಪಿ ಹಲವು ದಿನಗಳಿಂದ ತನ್ನನ್ನು ಪ್ರೀತಿಸುವಂತೆ ಯುವತಿಯನ್ನು ಪೀಡಿಸುತ್ತಿದ್ದ ಎಂದು ತಿಳಿದು ಬಂದಿದೆ. ಆದರೆ, ಯುವತಿ ಈತನ ಪ್ರೀತಿಯನ್ನು ನಿರಾಕರಿಸಿದ್ದಳು ಎನ್ನಲಾಗಿದೆ. ಈತನ ವಿರುದ್ಧ ಹಲವು ಕಳ್ಳತನ ಪ್ರಕರಣಗಳಲ್ಲಿ ಶಾಮೀಲಾದ ಆರೋಪವೂ ಇದೆ. ಜತೆಗೆ, ಬೈಕ್ ಕಳ್ಳತನದಲ್ಲಿಯೂ ಆರೋಪಿಯಾಗಿದ್ದಾನೆ.

ಈ ಹಿಂದೆ ಮೈಸೂರಿಗೆ ಬಾ ಎಂದು ಅಂಜಲಿಗೆ ವಿಶ್ವ ಧಮ್ಕಿ ಹಾಕಿದ್ದ. ಅಕಸ್ಮಾತ್ ನೀನು ನನ್ನ ಜೊತೆ ಬರದೆ ಹೋದರೆ ನೇಹಾ ಮಾದರಿ ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದ. ಅದರಂತೆಯೇ ಬುಧವಾರ (ಮೇ 15) ಬೆಳಗ್ಗೆ 5.30ಕ್ಕೆ ಮನೆಗೆ ನುಗ್ಗಿ ಚಾಕುವಿನಿಂದ ಇರಿದಿದ್ದಾನೆ.

ಮನೆಯವರು ತಡೆಯಲು ಮುಂದಾದರೂ ಬಿಡದೆ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಆರೋಪಿಯನ್ನು ಪತ್ತೆ ಹಚ್ಚಲಾಗುತ್ತಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *