Ad Widget .

ಒಡಿಶಾ : ಬಿಜೆಪಿಯು ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ನಾಶ ಎಂದ ರಾಹುಲ್

ಸಮಗ್ರ ನ್ಯೂಸ್ : ಬಿಜೆಪಿಯು ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ನಾಶಪಡಿಸಲು ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ.

Ad Widget . Ad Widget .

ಒಡಿಶಾದ ಬೋಲಂಗೀರ್ನಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಈ ಬಾರಿಯ ಚುನಾವಣೆ ಗೆದ್ದರೆ ದೇಶವನ್ನು 22 ಬಿಲಿಯನೇರ್ಗಳು ನಡೆಸಲಿದ್ದು, ಸಾರ್ವಜನಿಕ ವಲಯವನ್ನು ಖಾಸಗೀಕರಣಗೊಳಿಸಲಿದೆ ಎಂದರು.

Ad Widget . Ad Widget .

ಸಂವಿಧಾನದ ಪುಸಕ್ತದ ಪ್ರತಿಯನ್ನು ಕೈಯಲ್ಲಿ ಹಿಡಿದು ಭಾಷಣ ಮಾಡಿದ ರಾಹುಲ್ ಗಾಂಧಿ, ಈ ಪುಸ್ತಕವನ್ನು ಹರಿದು ಬಿಸಾಡಲು ಬಿಜೆಪಿ ಬಯಸುತ್ತಿದೆ. ಆದರೆ ಹಾಗೇ ಆಗಲು ಕಾಂಗ್ರೆಸ್ ಹಾಗೂ ಈ ದೇಶದ ಜನತೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದರೆ ಆದಿವಾಸಿಗಳು, ದಲಿತರು, ಹಿಂದುಳಿದ ವರ್ಗಗಳಿಗೆ ಒದಗಿಸಲಾದ ಮೀಸಲಾತಿಯನ್ನು ರದ್ದುಗೊಳಿಸಲಿದೆ. ಹಾಗಾಗಿ ಜನಪರ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಅವರು ಮನವಿ ಮಾಡಿದ್ದಾರೆ.

Leave a Comment

Your email address will not be published. Required fields are marked *