Ad Widget .

ಉಡುಪಿ : ಶಿರ್ವ ಫೈಝುಲ್ ಇಸ್ಲಾಂ ಮದ್ರಸದ 4 ಮಕ್ಕಳು ನಾಪತ್ತೆ

ಸಮಗ್ರ ನ್ಯೂಸ್ : ಶಿರ್ವ ಫೈಝುಲ್ ಇಸ್ಲಾಂ ಮದ್ರಸದ ನಾಲ್ವರು ಮಕ್ಕಳು ಮೇ 14ರಂದು ಮಧ್ಯಾಹ್ನದಿಂದ ನಾಪತ್ತೆಯಾಗಿದ್ದು, ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget . Ad Widget .

ನಾಪತ್ತೆಯಾದ ವಿದ್ಯಾರ್ಥಿಗಳನ್ನು ಬಿಹಾರ ಮೂಲದ ತಬಾರಕ್, ಜಂಶೀದ್, ತಂಝೀರ್ ಆಲಮ್, ಶಾಹಿಲ್ ಎಂದು ಗುರುತಿಸಲಾಗಿದೆ. ಇವರಲ್ಲಿ ಇಬ್ಬರು ಅಪ್ರಾಪ್ತರಾಗಿದ್ದಾರೆ.

Ad Widget . Ad Widget .

ಮದ್ರಸ ಶಿಕ್ಷಣ ಕಲಿಯುತ್ತಿದ್ದ ಇವರು, ಮಂಗಳವಾರ ಮಧ್ಯಾಹ್ನ ವೇಳೆ ಮದ್ರಸದಿಂದ ಹೊರಗಡೆ ಹೋದವರು ಈವರೆಗೆ ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆಂದು ತಿಳಿದು ಬಂದಿದೆ. ಇಲ್ಲಿಂದ ಅವರು ತಮ್ಮ ಊರಿಗೆ ಹೋಗಿರಬಹುದು ಎಂದು ಶಂಕಿಸಲಾಗಿದೆ.

ಈ ಬಗ್ಗೆ ಫೈಝುಲ್ ಇಸ್ಲಾಂ ಎಜುಕೇಶನ್ ಟ್ರಸ್ಟ್ ಫರ್ವೇಝ್ ಸಲೀಂ ನೀಡಿದ ದೂರನಂತೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *