Ad Widget .

ಹಾಸನ: ಡ್ರಾಪ್ ಕೊಡುವ ನೆಪದಲ್ಲಿ ಅತ್ಯಾಚಾರ: ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರ ನಿರ್ಲಕ್ಷ್ಯ

ಸಮಗ್ರ ನ್ಯೂಸ್ : ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ ಆರೋಪಿಯನ್ನು ಬಂಧಿಸುವಲ್ಲಿ ಹಳೇಬೀಡು ಠಾಣೆ ಪೊಲೀಸರು ನಿರ್ಲಕ್ಷ್ಯವಹಿಸಿದ್ದಾರೆ ಎಂದು ನೊಂದ ಸಂತ್ರಸ್ತೆ ಅಳಲು ತೋಡಿಕೊಂಡರು.

Ad Widget . Ad Widget .

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಫೆಬ್ರವರಿ ೨೮ ರಂದು ಬೇಲೂರು ತಾಲೂಕಿನ ಹಗರೆ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ರಾತ್ರಿ ೮ ಗಂಟೆ ಸುಮಾರಿಗೆ ಪರಿಚಿತನಾದ ಚಿಕ್ಕೂರು ಹೊಸಳ್ಳಿ ಗ್ರಾಮದ ಗಿರೀಶ್ ಎಂಬ ವ್ಯಕ್ತಿ ಮನೆಗೆ ಡ್ರಾಪ್ ಮಾಡುವ ನೆಪದಲ್ಲಿ ನಿರ್ಜನ ಪ್ರದೇಶದಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾರೆ ಎಂದು ದೂರಿದರು.

Ad Widget . Ad Widget .

ಈ ಬಗ್ಗೆ ಹಳೇಬೀಡು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಈ ಬಗ್ಗೆ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಅತ್ಯಾಚಾರ ನಡೆದಾಗ ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಆದರೆ ಪೊಲೀಸರು ಆತನನ್ನು ಕೇವಲ ಹತ್ತು ನಿಮಿಷ ಪೊಲೀಸ್ ಠಾಣೆಯಲ್ಲಿ ಇಟ್ಟುಕೊಂಡು ಬಿಡುಗಡೆ ಮಾಡಿ ಕಳುಹಿಸಿದ್ದಾರೆ ಎಂದು ದೂರಿದರು.

ಸಂತ್ರಸ್ತೆ ಪತಿ ಮಾತನಾಡಿ ಪ್ರಕರಣದ ಬಗ್ಗೆ ಎಸ್ಪಿ, ಡಿವೈಎಸ್ಪಿ ಅವರಿಗೂ ದೂರು ನೀಡಲಾಗಿದೆ ಆದರೆ ಈ ವರೆಗೂ ಕೇವಲ ತನಿಖಾ ಹಂತದಲ್ಲಿ ಇದೆ ಎಂದು ಹೇಳಿ ಪ್ರಕರಣವನ್ನು ಮುಚ್ಚಿ ಹಾಕುವ ಹುನ್ನಾರ ಮಾಡಿದ್ದಾರೆ ಎಂದು ದೂರಿದ ಅವರು ಕೂಡಲೇ ಅತ್ಯಾಚಾರಿಯನ್ನು ಬಂಧಿಸಿ ನಮಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ವಿಫಲ ಆಗಿದ್ದಾರೆ ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಪ್ರಕರಣವನ್ನು ಗಂಭೀರ ವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Leave a Comment

Your email address will not be published. Required fields are marked *