ಭ್ರೂಣಕ್ಕೂ ಬದುಕುವ ಹಕ್ಕು ಇದೆ/ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಸುಪ್ರೀಂ

ಸಮಗ್ರ ನ್ಯೂಸ್: ಗರ್ಭದಲ್ಲಿರುವ ಭ್ರೂಣಕ್ಕೂ ಬದುಕುವ ಮೂಲಭೂತ ಹಕ್ಕು ಇದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್, 27 ವಾರಗಳ ಗರ್ಭಣಿ ಗರ್ಭಪಾತ ಮಾಡಿಸಿಕೊಳ್ಳಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

Ad Widget ... ..

ಗರ್ಭಪಾತಕ್ಕೆ ಅನುಮತಿ ಕೋರಿ 20 ವರ್ಷದ ಅವಿವಾಹಿತ ಯುವತಿಯು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಯುವತಿ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿಆರ್ ಗವಾಯಿ ನೇತೃತ್ವದ ಪೀಠ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿತ್ತು.

Ad Widget

ನ್ಯಾಯಮೂರ್ತಿಗಳಾದ ಎಸ್‍ವಿಎನ್ ಭಟ್ಟಿ ಮತ್ತು ಸಂದೀಪ್ ಮೆಹ್ರಾ ಅವರನ್ನೊಳಗೊಂಡ ನ್ಯಾಯಪೀಠವು ಕಾನೂನಿಗೆ ವಿರುದ್ಧವಾಗಿ ನಾವು ಯಾವುದೇ ಆದೇಶವನ್ನು ನೀಡಲು ಸಾಧ್ಯವಿಲ್ಲ ಎಂದು ತಿಳಿಸಿತು.

ಈ ವೇಳೆ ವೈದ್ಯಕೀಯ ಗರ್ಭಪಾತ ಕಾಯ್ದೆಯ ತಾಯಿಯ ಹಕ್ಕುಗಾಗಿ ಕುರಿತಾಗಿದೆ ಎಂದು ಯುವತಿಯ ಪರ ವಕೀಲರು ನ್ಯಾಯಾಧೀಶರ ಪೀಠದೆದರು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ ಗರ್ಭ ಏಳು ವಾರದವನ್ನು ಮೀರಿದೆ. ಭ್ರೂಣಕ್ಕೂ ಬದುಕುವ ಹಕ್ಕು ಇದೆ ಎಂದು ಹೇಳಿದೆ.

Leave a Comment

Your email address will not be published. Required fields are marked *