Ad Widget .

ಸಚಿನ್ ತೆಂಡೂಲ್ಕರ್ ಸೆಕ್ಯೂರಿಟಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಸಮಗ್ರ ನ್ಯೂಸ್: ಸಚಿನ್ ತೆಂಡೂಲ್ಕರ್ ಅವರ ಭದ್ರತಾ ಸಿಬ್ಬಂದಿ ಪ್ರದೀಪ್ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ರಾಜ್ಯ ಮೀಸಲು ಪೊಲೀಸ್ ಪಡೆಯ ಜವಾನ್ ಪ್ರಕಾಶ್ ಕಾಪ್ಡೆ (39) ಮೃತ ದುರ್ದೈವಿ. ಸಚಿನ್ ಅವರ ವಿವಿಐಪಿ ಭದ್ರತೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಚರು ಇತ್ತೀಚೆಗಷ್ಟೇ ಕರ್ತವ್ಯಕ್ಕೆ ರಜೆ ಪಡೆದು ಊರಿಗೆ ತೆರಳಿದ್ದರು. ಆದರೆ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

Ad Widget . Ad Widget .

ಪ್ರಕಾಶ್ ಮಹಾರಾಷ್ಟ್ರದಲ್ಲಿರುವ ತಮ್ಮ ಮನೆಯಲ್ಲಿ ಬುಧವಾರ ಬೆಳಗ್ಗಿನ ಜಾವ 1:30ಕ್ಕೆ ತನ್ನ ಸರ್ವೀಸ್ ಗನ್ ನಿಂದ ಕುತ್ತಿಗೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕುಟುಂಬಸ್ಥರು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಪ್ರಕಾಶ್ ಅದಾಗಲೇ ಮೃತಪಟ್ಟಿದ್ದರು. ಆದರೆ ಪ್ರಕಾಶ್ ಆತ್ಮಹತ್ಯೆ ಅನುಮಾನಾಸ್ಪದ ಸಾವು ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣವೇನು ಎಂಬುದನ್ನು ತಿಳಿಯಲು ಪ್ರಕಾಶ್ ಅವರ ಪೋಷಕರು, ಪತ್ನಿ, ಮಕ್ಕಳು, ಹತ್ತಿರದ ಸಂಬಂಧಿಕರು ಮತ್ತು ಸ್ನೇಹಿತರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿವಿಐಪಿ ಭದ್ರತಾ ಸಿಬ್ಬಂದಿಯ ಆತ್ಮಹತ್ಯೆಯ ಬಗ್ಗೆಯೂ ಎಸ್‌ಆರ್‌ಪಿಎಫ್ ತನಿಖೆ ನಡೆಸುತ್ತಿದೆ.

Ad Widget . Ad Widget .

ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರಕಾಶ್ ಕಾಪ್ಡೆ ಮೃತದೇಹ, ರಿವಾಲ್ವರ್ , ಮೊಬೈಲ್ ಫೋನ್ ಸೇರಿದಂತೆ ಇತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Leave a Comment

Your email address will not be published. Required fields are marked *