ಸಮಗ್ರ ನ್ಯೂಸ್: ಭಾರತದ ಪುಟ್ಬಾಲ್ ದಿಗ್ಗಜ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ್ದಾರೆ. ಕೋಲ್ಕತ್ತಾದ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ಜೂನ್ 6 ರಂದು ನಡೆಯಲಿರುವ ಕುವೈತ್ ವಿರುದ್ಧ ಅಂತಾರಾಷ್ಟ್ರೀಯ ಫುಟ್ಬಾಲ್ ನಿಂದ ನಿವೃತ್ತಿಯಾಗುವುದಾಗಿ ಛೆಟ್ರಿ ಹೇಳಿದ್ದಾರೆ.
39 ವರ್ಷದ ಸುನಿಲ್ ಭಾರತ ಪರ ಇದುವರೆಗೆ 150 ಪಂದ್ಯಗಳನ್ನು ಆಡಿದ್ದಾರೆ. ಈ ಬಾರಿ 94 ಗೋಲು ಗಳಿಸಿ ಹೊಸ ದಾಖಲೆ ಬರೆದಿದ್ದಾರೆ. ಸುನಿಲ್ ಭೆಟ್ರಿ ಈಗ ಕುವೈತ್ ವಿರುದ್ಧದ ವಿಶ್ವಕಪ್ ಅರ್ಹತಾ ಪಂದ್ಯದೊಂದಿಗೆ ತಮ್ಮ ಅಂತಾರಾಷ್ಟ್ರೀಯ ಫುಟ್ಬಾಲ್ ವೃತ್ತಿಜೀವನವನ್ನು ಕೊನೆಗೊಳಿಸಲು ನಿರ್ಧರಿಸಿದ್ದಾರೆ.