Ad Widget .

ಮಾವಿನ ಹಣ್ಣು ಸವಿಯೋಣ ಬನ್ನಿ/ ಮೇ 24 ರಿಂದ ಲಾಲ್ ಬಾಗ್ ನಲ್ಲಿ ಮಾವಿನ ಮೇಳ

ಸಮಗ್ರ ನ್ಯೂಸ್: ಮೇ 24 ರಿಂದ ಜೂನ್ 10 ರವರೆಗೂ ಮಾವು ಹಾಗೂ ಹಲಸಿನ ಮೇಳ ಮಾಡುವುದಕ್ಕೆ ಮಾವು ಅಭಿವೃದ್ಧಿ ನಿಗಮ ಹಾಗೂ ಲಾಲ್ ಬಾಗ್ ತೋಟಗಾರಿಕೆ ಇಲಾಖೆ ನಿರ್ಧರಿಸಿದ್ದು, ಲಾಲ್ ಬಾಗ್ ನಲ್ಲಿ ಮಾವಿನ ಮೇಳ ನಡೆಸುವುದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ,

Ad Widget . Ad Widget .

ಕೋಲಾರ, ಶ್ರೀನಿವಾಸಪುರ, ಚಿಂತಾಮಣಿ, ಬೆಂಗಳೂರು ಗ್ರಾಮಾಂತರ, ಹಾವೇರಿ, ಧಾರವಾಡ ಸೇರಿದಂತೆ ನಾನಾ ಜಿಲ್ಲೆಗಳ ಮಾವು ಬೆಳೆಗಾರರು ಈ ಮಾವಿನ ಮೇಳದಲ್ಲಿ ಭಾಗವಹಿಸಲಿದ್ದಾರೆ. ಮೇಳದಲ್ಲಿ ವಾಣಿಜ್ಯ, ಪಾರಂಪರಿಕ ಮಾವಿನ ತಳಿಗಳು, ಮಿಡಿ ಮಾವು ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಇರಲಿದೆ.

Ad Widget . Ad Widget .

ಇನ್ನು ಐಐಎಚ್‍ಆರ್, ಜಿಕೆವಿಕೆ ಮತ್ತಿತರ ಸಂಸ್ಥೆಗಳು ಅಭಿವೃದ್ಧಿಪಡಿಸಿದ ಹಲಸಿನ ತಳಿಗಳು, ರೈತರು ಬೆಳೆದ ನಾನಾ ತಳಿಯ ಹಲಸಿನ ಹಣ್ಣನ್ನು ಮಾರಾಟ ಮಾಡಲಾಗುತ್ತದೆ. ಈ ವರ್ಷದ ಮೇಳದಲ್ಲಿ ಬಾದಾಮಿ, ರಸಪುರಿ, ಸೇಂಧೂರ, ಮಲಗೋವ, ನೀಲಂ, ಮಲ್ಲಿಕಾ, ಆಮ್ರಪಾಲಿ, ಬಂಗನಪಲ್ಲಿ, ತೋತಾಪುರಿ, ಸಕ್ಕರೆಗುತ್ತಿ ಸೇರಿದಂತೆ ನಾನಾ ತಳಿಯ ಹಣ್ಣುಗಳು ಇರಲಿವೆ.

Leave a Comment

Your email address will not be published. Required fields are marked *