Ad Widget .

ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಬಾಲಕರು ನೀರುಪಾಲು

ಸಮಗ್ರ ನ್ಯೂಸ್: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಬಾಲಕರು ನೀರುಪಾಲಾಗಿ, ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿದ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

Ad Widget . Ad Widget .

ಈಜಲು ತೆರಳಿದ್ದ ಜೀವನ್ (13), ಸಾತ್ವಿಕ್ (11), ವಿಶ್ವ (12), ಪೃಥ್ವಿ (12) ಮೃತ ದುರ್ದೈವಿಗಳು. ಇವರೆಲ್ಲ ಮುತ್ತಿಗೆ ಗ್ರಾಮದವರು. ಶಾಲೆಗೆ ರಜೆ ಇರುವುದರಿಂದ ಐವರು ಗೆಳೆಯರು ಈಜಲು ಹೊಳೆಗೆ ಹೋಗಿದ್ದರು. ಹೊಳೆಗೆ ಇಳಿದಾಗ ನೀರಿನಿಂದ ಹೊರಬರಲು ಆಗದೆ ನಾಲ್ವರು ನೀರುಪಾಲಾಗಿದ್ದಾರೆ. ಮತ್ತೊರ್ವ ಬದುಕುಳಿದಿದ್ದಾನೆ. ಇತ್ತ ಬದುಕುಳಿದ ಓರ್ವ ಬಾಲಕ ಓಡಿ ಹೋಗಿ ಸಮೀಪದಲ್ಲಿದ್ದವರಿಗೆ ಸುದ್ದಿ ತಿಳಿಸಿದ್ದ. ಆದರೆ ಕೆರೆ ಬಳಿ ಬಂದು ನೋಡುವಷ್ಟರಲ್ಲಿ ನಾಲ್ವರು ಬಾಲಕರು ಮುಳುಗಿದ್ದರು.

Ad Widget . Ad Widget .

ಸ್ಥಳಕ್ಕೆ ಆಲೂರು ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಅಗ್ನಿಶಾಮಕದಳದ ಸಿಬ್ಬಂದಿಯಿಂದ ಹೊರತೆಗೆದಿದ್ದಾರೆ. ಸ್ಥಳಕ್ಕೆ ಹಾಸನ ಡಿಸಿ ಸತ್ಯಭಾಮ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

Leave a Comment

Your email address will not be published. Required fields are marked *