ಹವಾಮಾನ ವರದಿ| ದ.ಕ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ| ಮೇ.18 ಮತ್ತು 19ರಂದು ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18ರಿಂದ 21ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 19 ಮತ್ತು 20ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

Ad Widget ... ..

ಆರೆಂಜ್ ಅಲರ್ಟ್‌ ಇರುವ ದಿನಗಳಲ್ಲಿ ಮಿಂಚು, ಗುಡುಗು ಸಿಡಿಲುಗಳಿಂದ ಕೂಡಿದ ಭಾರಿ ಮಳೆಯಾಗಲಿದೆ. ಜಿಲ್ಲೆಯ ಕೆಲವೆಡೆ 11.55 ಸೆಂ.ಮೀನಿಂದ 20.44 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

Ad Widget

ಇದೇ 18 ಮತ್ತು 21ರಂದು ಜಿಲ್ಲೆಯಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಈ ಎರಡು ದಿನಗಳಲ್ಲಿ ಗುಡುಗು ಸಿಡಿಲುಗಳಿಂದ ಕೂಡಿದ ಮಳೆಯಾಗಲಿದೆ. ಕೆಲವೆಡೆ 6.45 ಸೆಂ.ಮೀ.ಯಿಂದ 11.55 ಸೆಂ.ಮೀ.ವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave a Comment

Your email address will not be published. Required fields are marked *