Ad Widget .

ಸಾರ್ವಜನಿಕರೇ ಎಚ್ಚರ/ ಹೆಚ್ಚುತ್ತಿದೆ ಡೆಂಘೀ ಜ್ವರ

ಸಮಗ್ರ ನ್ಯೂಸ್: ಮಳೆ ಆರಂಭವಾಗಿರುವ ಹಿನ್ನಲೆಯಲ್ಲಿ ಡೆಂಘೀ ಜ್ವರ ಪ್ರಕರಣಗಳು ತೀವ್ರ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಪಾಸಿಟಿವಿಟಿ ದರ ಶೇ.21ಕ್ಕೆ ಏರಿಕೆಯಾಗಿದೆ. ಸಾವಿರಾರು ಮಂದಿಯಲ್ಲಿ ಜ್ವರ ಕಾಣಿಸಿಕೊಂಡಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

Ad Widget . Ad Widget .

ಆರೋಗ್ಯ ಇಲಾಖೆಯ ಅಂಕಿ-ಅಂಶಗಳ ಪ್ರಕಾರವೇ ಪ್ರಸಕ್ತ ಸಾಲಿನಲ್ಲಿ ಕಳೆದ ನಾಲ್ಕೂವರೆ ತಿಂಗಳಲ್ಲಿ ಒಟ್ಟು 2,877 ಮಂದಿಗೆ ಡೆಂಘೀ ಜ್ವರ ದೃಢಪಟ್ಟಿದೆ. ಕಳೆದ ವರ್ಷ ಈ ಅವಧಿಯಲ್ಲಿ ಕೇವಲ 1,724 ಪ್ರಕರಣ ವರದಿಯಾಗಿತ್ತು. ಕಳೆದ ಒಂದು ವಾರದಲ್ಲಿ 879 ಮಂದಿಗೆ ಪರೀಕ್ಷೆ ನಡೆಸಿದ್ದರೆ 186 ಮಂದಿಗೆ ಡೆಂಘೀ ದೃಢಪಟ್ಟಿದೆ. ಹೀಗಾಗಿ ಡೆಂಘೀ ವ್ಯಾಪಕವಾಗಿ ಹರಡುವ ಲಕ್ಷಣ ಕಾಣಿಸುತ್ತಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Ad Widget . Ad Widget .

ಡೆಂಘೀ ಜ್ವರವು ವೈರಲ್ ಸೋಂಕುಗಳಲ್ಲಿ ಒಂದಾಗಿದ್ದು, ಸೊಳ್ಳೆಯಿಂದ ಹರಡುವ ಕಾಯಿಲೆ. ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಜಾತಿಯ ಸೊಳ್ಳೆಗಳಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಸೊಳ್ಳೆ ಕಚ್ಚಿದ ನಾಲ್ಕರಿಂದ ಹತ್ತು ದಿನಗಳ ಒಳಗೆ ರೋಗ ಲಕ್ಷಣಗಳು ಕಾಣಿಸಿಕೊಳ್ಳಬಹುದು. ದೇಹದ ತಾಪಮಾನ ವಿಪರೀತ ಹೆಚ್ಚಾಗಿ ಹಠಾತ್ತನೆ ಜ್ವರ ಕಾಣಿಸಿಕೊಳ್ಳುತ್ತದೆ. ಕಣ್ಣಿನ ಗುಡ್ಡೆಯ ಹಿಂಭಾಗದಲ್ಲಿ ನೋವು, ತಲೆ ನೋವು, ಮೈ-ಕೈ ನೋವು ಸಾಮಾನ್ಯ ಲಕ್ಷಣಗಳು. ಡೆಂಘೀ ಜ್ವರಕ್ಕೆ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಇಲ್ಲದಿರುವುದಿಂದ ರೋಗ ಲಕ್ಷಣಗಳಿಗೆ ಅನುಸಾರವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Leave a Comment

Your email address will not be published. Required fields are marked *