Ad Widget .

ಮಥುರಾ: ಹಿಂದೂ ಯುವಕನನ್ನು ಮದುವೆಯಾದ ಮುಸ್ಲಿಂ ಮಹಿಳೆ

ಸಮಗ್ರ ನ್ಯೂಸ್ : ತ್ರಿವಳಿ ತಲಾಖ್ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

Ad Widget . Ad Widget .

ರುಬಿನಾ ಎಂಬ ಮಹಿಳೆಯ ಪತಿ ತ್ರಿವಳಿ ತಲಾಖ್ ನೀಡಿದ್ದನು. ಇದರಿಂದ ನೊಂದಿದ್ದ ರುಬಿನಾ ತನ್ನ ಧರ್ಮ ಬದಲಿಸಿಕೊಂಡು ಹಿಂದೂ ಯುವಕನನ್ನೇ ಕೈ ಕೈ ಹಿಡಿದಿದ್ದಾಳೆ.

Ad Widget . Ad Widget .

ರುಬಿನಾ ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆ ಆಗಿದ್ದಳು. ಆದರೆ ಪತಿಯ ಚಿತ್ರಹಿಂಸೆಯಿಂದ ಆಕೆ ಬೇಸತ್ತಿದ್ದಳು. ಕೊನೆಗೆ ಆತ ರುಬಿನಾಗೆ ತಲಾಖ್ ನೀಡಿದ್ದನು.

ಆತನಿಂದ ನೊಂದ ರುಬಿನಾ ತನ್ನ ಎರಡು ಮಕ್ಕಳನ್ನು ಗಂಡನ ಬಳಿಯೇ ಬಿಟ್ಟು ಮನೆ ಬಿಟ್ಟು ಹೊರಬಂದಿದ್ದಳು. ಇದಾದ ಬಳಿಕ ಆಕೆಗೆ ಪ್ರಮೋದ್ ಎಂಬಾತನ ಜೊತೆ ಪ್ರೇಮಾಂಕುರವಾಗಿದ್ದು, ಇದೀಗ ಆತನನ್ನೇ ವರಿಸಿದ್ದಾಳೆ. ಇದಕ್ಕೂ ಮುನ್ನ ಪ್ರೀತಿಗಾಗಿ ತನ್ನ ಧರ್ಮವನ್ನೇ ಬದಲಿಸಿಕೊಂಡಿದ್ದಾಳೆ.

ಇನ್ಸ್ಟಾಗ್ರಾಂನಲ್ಲಿ ರುಬಿನಾ ಮತ್ತು ಪ್ರಮೋದ್ ಕಶ್ಯಪ್ಗೆ ಪರಿಚಯವಾಗಿತ್ತು. ಕೆಲವು ಸಂಭಾಷಣೆಗಳ ನಂತರ ಇವರಿಬ್ಬರೂ ಸ್ನೇಹಿತರಾಗಿದ್ದರು. ನಿಧಾನವಾಗಿ ಸ್ನೇಹ ಪ್ರೀತಿಗೆ ತಿರುಗಿ ಮದುವೆಯಾಗಲು ನಿರ್ಧರಿಸಿದ್ದರು.

ಪ್ರಮೋದ್ ಕಶ್ಯಪ್ ರುಬಿನಾಳಗಿಂತ 8 ವರ್ಷ ಚಿಕ್ಕವನು. ಆತನನ್ನು ವರಿಸಲು ಮೊದಲು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದು, ಹೆಸರನ್ನು ಪ್ರೀತಿ ಎಂದು ಬದಲಿಸಿಕೊಂಡಳು.

ರುಬೀನಾ ಮತ್ತು ಪ್ರಮೋದ್ ಬರೇಲಿಗೆ ಹೋಗಿ ಹಿಂದೂ ಸಂಪ್ರದಾಯಗಳ ಮೂಲಕ ಮದುವೆಯಾಗಿದ್ದಾರೆ. ವೃಂದಾವನದ ಬಂಗಾರ್ ಕಾಶಿರಾಮ್ ಕಾಲೋನಿಯಲ್ಲಿ ವಾಸಿಸುತ್ತಿದ್ದ ರುಬಿನಾ ತನ್ನ ಪೂರ್ವಜರು ಮೊಘಲರ ಭಯದಿಂದ ಇಸ್ಲಾಂ ಧರ್ಮದ ಅನುಯಾಯಿಗಳಾದರು,. ಆದರೆ ನಾನು ಹಿಂದೂ ದೇವರುಗಳನ್ನು ನಂಬುತ್ತೇನೆ ಮತ್ತು ನಿತ್ಯ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

ರುಬಿನಾ ಇಸ್ಲಾಂ ಧರ್ಮದ ಮಹಿಳೆಯರನ್ನು ನಡೆಸಿಕೊಳ್ಳುವ ರೀತಿಯನ್ನು ಧಿಕ್ಕರಿಸಿದ್ದು ಮಾತ್ರವಲ್ಲದೆ, ‘ಹಲಾಲ್’ ಮತ್ತು ತಲಾಖ್ ಇವೆಲ್ಲ ಧರ್ಮದಲ್ಲಿನ ಅನಿಷ್ಠ ಪದ್ಧತಿ ಎಂದೂ ಕರೆದಿದ್ದಾರೆ. ಹಿಂದೂ ಧರ್ಮವನ್ನು ಸ್ವೀಕರಿಸುವಂತೆ ಯಾರೂ ಬಲವಂತ ಮಾಡಿಲ್ಲ. ಅದು ನನ್ನ ಆಯ್ಕೆ ಎಂದು ಸ್ಪಷ್ಟಪಡಿಸಿದ್ದಾರೆ.

Leave a Comment

Your email address will not be published. Required fields are marked *