Ad Widget .

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಸಮಗ್ರ ನ್ಯೂಸ್‌ : ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು ವಾಹನದ ವೀಡಿಯೋ ಚಿತ್ರೀಕರಿಸಿದ ಸಾರ್ವಜನಿಕರೊಬ್ಬರು ಸದ್ರಿ ವಾಹನದ ವಿಮಾ ಅವಧಿಯು ಮುಕ್ತಾಯವಾಗಿರುವುದಾಗಿಯೂ, ಪೊಲೀಸ್ ಇಲಾಖೆಯು ವಿಮಾ ಕಂತು ಪಾವತಿಸದ ವಾಹನಗಳನ್ನು ಬಳಸುತ್ತಿರುವುದಾಗಿಯೂ ಸುಳ್ಳು ಸಂದೇಶವನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

Ad Widget . Ad Widget .

ಈ ಕುರಿತು ಸ್ಪಷ್ಠನೆ ನೀಡಿರುವ ಪೊಲೀಸ್ ಇಲಾಖೆ, ಪೊಲೀಸ್ ಇಲಾಖೆಯ ಎಲ್ಲಾ ವಾಹನಗಳೂ ಕರ್ನಾಟಕ ಗವರ್ನಮೆಂಟ್ ಇನ್ಯುರೆನ್ಸ್ ಡಿಪಾರ್ಟ್‌ಮೆಂಟ್ (ಕೆ.ಜಿ.ಐ.ಡಿ) ವಿಮೆಯನ್ನು ಕಡ್ಡಾಯವಾಗಿ ಹೊಂದಿರುತ್ತದೆ ಹಾಗೂ ಸದರಿ ವಿಮೆಯನ್ನು ಕಾಲ ಕಾಲಕ್ಕೆ ನವೀಕರಿಸಲಾಗಿದೆ.

Ad Widget . Ad Widget .

ವಿಮೆ ನವೀಕರಣಗೊಳ್ಳದ ಯಾವುದೇ ಇಲಾಖಾ ವಾಹನಗಳನ್ನು ಕರ್ತವ್ಯಕ್ಕೆ ಬಳಸಿಕೊಳ್ಳಲಾಗುವುದಿಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ತೋರಿಸಲಾದ ಇಲಾಖಾ ಹೆದ್ದಾರಿ ಗಸ್ತು ವಾಹನ ನೊಂದಣೆ ಸಂಖ್ಯೆ: ಕೆಎ-19-ಜಿ-1023 ಇದರ ವಿಮಾ ಅವಧಿಯು ದಿನಾಂಕ: 13-10-2025 ರ ತನಕ ಮತ್ತು ವಾಹನದ ಮಾಲಿನ್ಯ ತಪಾಸಣಾ ಅವಧಿಯು ದಿನಾಂಕ: 08-01-2025 ರ ತನಕ ಚಾಲ್ತಿಯಲ್ಲಿ ಇರುತ್ತದೆ ಎಂದು ತಿಳಿಸಿದೆ.

ಅಲ್ಲದೇ ಈ ವಿಷಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವ್ಯಕ್ತಿಯು ತನ್ನ ಮೋಟಾರ್ ಬೈಕ್‌ನ ವಾಯುಮಾಲಿನ್ಯ ಪತ್ರವನ್ನು ತೋರ್ಪಡಿಸದೇ ಇರುವುದರಿಂದ ಆ ವ್ಯಕ್ತಿಯ ಮೇಲೆ ರೂ. 500/- ದಂಡವನ್ನು ವಿಧಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *